ಆ್ಯಪ್ನಗರ

ಜುಲೈ 7 ರಂದು ಬಜೆಟ್ ಮಂಡನೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದಿರುವ ಹಿನ್ನಲೆ, ಹೊಸದಾಗಿ ಜುಲೈ ಕ7 ರಂದು ಬಜೆಟ್‌ ಮಂಡನೆ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನು ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ. 1964 ನಲ್ಲೇ ನಿಯಮ ಜಾರಿಗೆ ಬಂದಿದ್ದು, ಇದರ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಹಾಲಿನ ದರ ಏರಿಕೆ ಬಗ್ಗೆ ಚಿಂತಿಸಿಲ್ಲ. ವಿದ್ಯುತ್‌ ದರ ಸರ್ಕಾರ ಏರಿಕೆ ಮಾಡಿರುವುದಲ್ಲ. ವಾರ್ಷಿಕವಾಗಿ ಇದು ಏರಿಕೆ ಆಗುವುದು ಎಂದು ತಿಳಿಸಿದರು.

Authored byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 5 Jun 2023, 3:19 pm

ಹೈಲೈಟ್ಸ್‌:

  • ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
  • ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿಲ್ಲ. ಆದರೆ ಜುಲೈ 3 ರಂದು ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ
  • ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ. 1964 ಆಕ್ಟ್‌ ಪ್ರಕಾರ, 12 ವರ್ಷ ಮೇಲ್ಟಟ್ಟ ವಯಸ್ಸಾಗಿರುವ ರಾಸುಗಳು, ಬರಡು ರಾಸುಗಳು ಹಾಗೂ ವ್ಯವಸಾಯಕ್ಕೆ ಉಪಯೋಗಕ್ಕೆ ಬಾರದ ರಾಸುಗಳು ಎಂದು ಹೇಳಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ. ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.
ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ. ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿಲ್ಲ. ಆದರೆ ಜುಲೈ 3 ರಂದು ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ. 1 ವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಬಳಿಕ ಶುಕ್ರವಾರ ಬಜೆಟ್ ಮಂಡನೆ ಆಗಲಿದೆ ಎಂದರು.

ವಿದ್ಯುತ್ ದುಂದುವೆಚ್ಚ ದುರುಪಯೋಗ ಮಾಡುವಂತೆ ಜನರಿಗೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ : ಸಿದ್ದರಾಮಯ್ಯ ಆರೋಪ

ಬಜೆಟ್‌ ತಯಾರಿಕ ಸಭೆ ಇನ್ನೂ ಪ್ರಾರಂಭ ಆಗಿಲ್ಲ. ಈಗಿರುವ ಬಜೆಟ್, ಬಿಜೆಪಿ ಸರ್ಕಾರ ಮಂಡಿಸಿರುವುದು 3,09,785 ಕೋಟಿ ರೂಪಾಯಿ ಇದೆ ಎಂದರು.


ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ


ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ. 1964 ಆಕ್ಟ್‌ ಪ್ರಕಾರ, 12 ವರ್ಷ ಮೇಲ್ಟಟ್ಟ ವಯಸ್ಸಾಗಿರುವ ರಾಸುಗಳು, ಬರಡು ರಾಸುಗಳು ಹಾಗೂ ವ್ಯವಸಾಯಕ್ಕೆ ಉಪಯೋಗಕ್ಕೆ ಬಾರದ ರಾಸುಗಳನ್ನು ವಧೆ ಮಾಡಬಹುದು ಎಂದು ಹೇಳಿದ್ದಾರೆ. ಆಕ್ಟ್ 1964 ನಲ್ಲೇ ಆಕ್ಟ್‌ ಆಗಿದೆ. ಈ ಬಗ್ಗೆ ಇನ್ನೂ ಏನೂ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ನಲ್ಲಿ ಚರ್ಚಿಸುತ್ತೇವೆ ಎಂದರು.

ವಿದ್ಯುತ್ ದರ ಏರಿಕೆ ವಿಚಾರ
ವಿದ್ಯುತ್ ದರ ಏರಿಕೆ ಮಾಡಲು ನಾವು ತೀರ್ಮಾನ ಮಾಡುವುದಲ್ಲ. ಆರ್‌ಎಸಿ ಎಂಬ ಬೋರ್ಡ್ ಇದೆ. ಅವರೇ ನಿರ್ಧಾರ ಮಾಡುತ್ತಾರೆ, ಹಿಂದೆಯೇ ಆಗಿತ್ತು, ಈಗ ಜಾರಿಯಾಗಿದೆ ಎಂದರು.

ಇಂದಿರಾ ಕ್ಯಾಂಟೀನ್ ಮರು ಜಾರಿ

ಇಂದಿರಾ ಕ್ಯಾಂಟೀನ್ ಮತ್ತೆ ಸರಿಪಡಿಸಲು ಸಿದ್ದತೆ ಮಾಡಲು ತಿಳಿಸಿದ್ದೇನೆ. ಸಿಬ್ಬಂದಿಗಳ ಸಂಬಳ ಕೊಟ್ಟಿಲ್ಲವಾದರೆ, ಕೊಡಲು ವ್ಯವಸ್ಥೆ ಮಾಡಲಾಗುವುದು ಎಂದರು.

ಹಾಲಿನ ದರ ಏರಿಕೆ

ಬಜೆಟ್‌ ಆಗಬೇಕಲ್ಲ. ಆಗ ಎಲ್ಲಾ ನಿರ್ಧಾರ ಮಾಡುತ್ತೇವೆ ಎಂದರು.

ಆರೋಗ್ಯವಂತ ಸಮಾಜದ ಉಳಿವಿಗೆ ಪುಸ್ತಕ ಅಗತ್ಯ; ಪ್ರಕಾಶಕರ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ
ದಾವಣಗೆರೆ ಜಿಲ್ಲೆಯಲ್ಲಿ ಪ್ರಥಮ ಪ್ರವಾಸ ಹಾಗೂ ಪ್ರಥಮಸಭೆ
ಕಾಂಗ್ರೆಸ್ ಪಕ್ಷಕ್ಕೆ ದಾವಣಗೆರೆ ಅದೃಷ್ಟದ ನೆಲ ಆದ್ದರಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ಬಳಿಕ ದಾವಣಗೆರೆಗೆ ಅಧಿಕೃತ ಪ್ರವಾಸ ಕೈಗೊಂಡಿದ್ದಾರೆ ಹಾಗೂ ಜಿಲ್ಲಾಮಟ್ಟದ ಪ್ರಥಮಸಭೆ ನಡೆಸಿದ್ದಾರೆ. ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜಿನ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದಿಂದ ಗೌರವ ರಕ್ಷೆ ನೀಡಲಾಯಿತು.ನಂತರ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯಕರ್ತರು ಅದ್ದೂರಿ ಸ್ವಾಗತಕೋರಿದರು.

ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್‌ ಮಾಡಿ, ಮಳೆ ಪರಿಸ್ಥಿತಿ ಬಗ್ಗೆ ಮುಂಜಾಗ್ರತೆ ಕ್ರಮ ವಹಿಸಲು ತಿಳಿಸಿದ್ದೇನೆ ಎಂದರು. ಪ್ರವಾಹ ಬರಬಾರದೆಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತೇವೆ. ಒಂದು ವೇಳೆ ಪ್ರವಾಹ ಬಂದರೆ, ಎದುರಿಸಲು ಸರ್ವಸಿದ್ದತೆ ತಯಾರಿ ಮಾಡಲು ತಿಳಿಸಿದ್ದೇನೆ ಎಂದರು.

ಕಾಕತಾಳಿಯ ಎಂಬಂತೆ ಮುಖ್ಯ ಮಂತ್ರಿಯಾದ ಮೇಲೆ ಪ್ರಥಮ ಜಿಲ್ಲಾ ಪ್ರವಾಸವಾಗಿ ದಾವಣಗೆರೆಗೆ ಆಗಮಿಸಿದ್ದೇನೆ.ದಾವಣಗೆರೆ ಜಿಲ್ಲೆಗೆ ವಿಶೇಷ ಕೊಡುಗೆ ನೀಡುವುದಾಗಿ ಇದೇ ವೇಳೆ ತಿಳಿಸಿದರು.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ