ಆ್ಯಪ್ನಗರ

ಹೈಕಮಾಂಡ್‌ ಒಪ್ಪಿಗೆ ಕೊಟ್ಟರೆ ಅರ್ಧ ಗಂಟೆಯ ಕೆಲಸ-ಡಿಸಿಎಂ

ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ಅವರ ಅಸಮಾಧಾನದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾಜಿಪರಮೇಶ್ವರ್‌ ಹೇಳಿದರು...

Vijaya Karnataka 25 Nov 2018, 5:00 am
ಬೆಂಗಳೂರು:''ಸಚಿವ ಸಂಪುಟ ವಿಸ್ತರಣೆ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಹೈಕಮಾಂಡ್‌ ಒಪ್ಪಿಗೆ ಕೊಟ್ಟರೆ ಅರ್ಧ ಗಂಟೆಯ ಕೆಲಸ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.
Vijaya Karnataka Web Parameshwar

ಗೃಹ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ''ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆ ಮಾಡಲು ಅವಕಾಶ ಕೇಳಿದ್ದೇವೆ ಅನುಮತಿ ಸಿಕ್ಕರೆ ಖಂಡಿತವಾಗಿಯೂ ಮಾಡುತ್ತೇವೆ,'' ಎಂದು ಹೇಳಿದರು.
ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ಅವರ ಅಸಮಾಧಾನದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸತೀಶ್‌ ಜಾರಕಿಹೊಳಿ ಅಸಮಾಧಾನದ ಬಗ್ಗ್ಗೆ ಅವರಿಂದಲೇ ತಿಳಿದುಕೊಳ್ಳುತ್ತೇನೆ. ವೈಯಕ್ತಿಕ ಅಥವಾ ಕ್ಷೇತ್ರದ ಕೆಲಸವಿದ್ದರೆ ಮಾತನಾಡುತ್ತೇನೆ. ಬೆಳಗಾವಿ ಅಧಿವೇಶನಕ್ಕೆ ಕಾಂಗ್ರೆಸ್‌ ಶಾಸಕರ ಗೈರಾಗುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ.ಯಾವ ಶಾಸಕರೂ ಆ ರೀತಿ ಹೇಳಿಲ್ಲ. ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿರಬಹುದು,'' ಎಂದರು.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದೆ. ಆದರೆ ಪ್ರಕರಣದ ಬಗ್ಗೆ ಹೆಚ್ಚು ವಿಚಾರ ಬಹಿರಂಗ ಪಡಿಸಲು ಸಾಧ್ಯವಾಗುವುದಿಲ್ಲ. ಈ ಪ್ರಕರಣದಲ್ಲಿ ಕೇಳಿ ಬಂದಿರುವ ಸಂಘ ಸಂಸ್ಥೆಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು.

-ಡಾ.ಜಿ.ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ