ಆ್ಯಪ್ನಗರ

ಇನ್ನೆರಡು ದಿನಗಳಲ್ಲಿ ವಿಧಾನಪರಿಷತ್ ಅಭ್ಯರ್ಥಿ ಆಯ್ಕೆ ಫೈನಲ್: ಬಸವರಾಜ ಬೊಮ್ಮಾಯಿ

ಅಭ್ಯರ್ಥಿಗಳ ಬಗ್ಗೆ ಜಿಲ್ಲೆಗಳಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಆಯ್ಕೆ ವಿಚಾರವಾಗಿ ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡೋ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ, ಆದರೆ ಯಾವುದೇ ನಿರ್ಧಾರ ಆಗಿಲ್ಲ

Vijaya Karnataka Web 9 Nov 2021, 10:23 pm
ಬೆಂಗಳೂರು: ಇನ್ನೆರಡು ದಿನಗಳಲ್ಲಿ ವಿಧಾನಪರಿಷತ್ ಅಭ್ಯರ್ಥಿ ಆಯ್ಕೆ ಫೈನಲ್ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Vijaya Karnataka Web ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ


ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, 25 ವಿಧಾನಪರಿಷತ್ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ, ಪದವೀದರ ಹಾಗೂ ಶಿಕ್ಷಕರ ಕ್ಷೇತ್ರದ ಬಗ್ಗೆ ಚರ್ಚೆ ಆಗಿದೆ ಎಂದರು.

ಬಿಬಿಎಂಪಿ ಚುನಾವಣೆ‌‌ಗೆ ಕಮಲ ಪಾಳಯ ಸಿದ್ಧತೆ, ಬೆಂಗಳೂರಿನ ಬಿಜೆಪಿ‌ ಜನಪ್ರತಿನಿಧಿಗಳ ಸಭೆ

ನಾಳೆ ನಾಡಿದ್ದರಲ್ಲಿ ಚರ್ಚೆ ಮಾಡಿ‌ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಿದ್ದೇವೆ. ಪರಿಷತ್ ಚುನಾವಣೆಗೆ ಎಲ್ಲಾ ಕ್ಷೇತ್ರದಲ್ಲಿ ಎರಡು, ಮೂರು ಹೆಸರು ಬಂದಿದೆ. ಅದೆಲ್ಲವನ್ನೂ ಪರಿಷ್ಕರಿಸಿ ನಿರ್ಧಾರ ಮಾಡಲಾಗಿವುದು ಎಂದು ತಿಳಿಸಿದರು.

ಅಭ್ಯರ್ಥಿಗಳ ಬಗ್ಗೆ ಜಿಲ್ಲೆಗಳಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಆಯ್ಕೆ ವಿಚಾರವಾಗಿ ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡೋ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ, ಆದರೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ: ವಿಧಾನಪರಿಷತ್ ಚುನಾವಣೆಗೆ ಸಿದ್ಧತೆ ಆರಂಭಿಸಿದ ಕಮಲ ಪಾಳೆಯ!

ಇದೇ ಸಂದರ್ಭದಲ್ಲಿ ಜನಸ್ವರಾಜ್ ಯಾತ್ರೆ ನವೆಂಬರ್ 18 ರಿಂದ ಆರಂಭಗೊಳ್ಳಲಿದೆ . ನಾಲ್ಕು ತಂಡಗಳು ರಾಜ್ಯ ಪ್ರವಾಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋರ್ ಕಮಿಟಿ ಸಭೆಯಲ್ಲಿ ಹಾನಗಲ್ ಸೋಲಿನ ಬಗ್ಗೆ ಚರ್ಚೆ

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹಾನಗಲ್ ಸೋಲಿನ ಕುರಿತಾಗಿಯೂ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಹಾನಗಲ್ ಸೋಲಿಗೆ ಕಾರಣ ಏನು, ಎಲ್ಲಿ ಪಕ್ಷ ಎಡವಿದೆ ಎಂಬ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಅದರ ಜೊತೆಗೆ ಜನಸ್ವರಾಜ್ ಯಾತ್ರೆ ಯಶಸ್ವಿಗೊಳಿಸುವ ಕುರಿತಾಗಿಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ