ಆ್ಯಪ್ನಗರ

ದೂರವಾಣಿ ಕದ್ದಾಲಿಕೆ ಪ್ರಕರಣ: ಸಿಬಿಐನಿಂದ ಎಫ್‌ಐಆರ್‌ ದಾಖಲು

ಕಳೆದ ಸಮ್ಮಿಶ್ರ ಸರಕಾರದ ಅವಧಿಯಲಲ್ಲಿ ನಡೆದಿರುವ ಫೋನ್‌ ಕದ್ದಾಲಿಕೆ ಭಾರಿ ವಿವಾದ ಸೃಷ್ಟಿಸಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.

Vijaya Karnataka Web 31 Aug 2019, 8:29 pm
ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರಕಾರದ ವೇಳೆ ನಡೆದಿರುವ ದೂರವಾಣಿ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ.
Vijaya Karnataka Web ಫೋನ್‌ ಟ್ಯಾಪಿಂಗ್‌
ಫೋನ್‌ ಟ್ಯಾಪಿಂಗ್‌


ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಡಳಿತ ಪಕ್ಷದ ಸಚಿವರು, ಶಾಸಕರು, ಪಕ್ಷಗಳ ಕೆಲ ಮುಖಂಡರು, ರಾಜಕೀಯ ನಾಯಕರು ಆಪ್ತ ಸಹಾಯಕರು, ಸಲಹೆಗಾರರ ದೂರವಾಣಿ ಕದ್ದಾಲಿಕೆ ಮಾಡಲಾಗಿತ್ತು.

ಈ ಸಂಬಂಧ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದರು.

ರಾಜ್ಯ ಸರಕಾರದ ಮನವಿ ಮೇರೆಗೆ ಪ್ರಕರಣ ಕೈಗೆತ್ತಿಕೊಂಡಿರುವ ಸಿಬಿಐ, ಈಗ ಎಫ್‌ಐಆರ್‌ ದಾಖಲಿಸಿದೆ.

ದೋಸ್ತಿ ಸರಕಾರ ಉಳಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸಲಾಗಿತ್ತು. ಹೀಗಾಗಿ ಪ್ರಮುಖ ದೂರವಾಣಿ ಕದ್ದಾಲಿಕೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಎಫ್‌ಐ ಆರ್‌ ದಾಖಲಿಸಿರುವ ಸಿಬಿಐ ಅತಿ ಶೀಘ್ರದಲ್ಲೇ ತನಿಖೆ ಆರಂಭಿಸಲಿದೆ.

ಪೊಲೀಸ್‌ ಇಲಾಖೆಯಲ್ಲಿ ಫೋನ್‌ ಕದ್ದಾಲಿಕೆ ನಡೆದಿದೆ ಎಂಬ ಮಾಹಿತಿಯ ಮೇರೆಗೆ ಪ್ರಕರಣದ ಜಾಡು ಹಿಡಿದಾಗ, ಇಡೀ ಜಾಲ ಬಹಿರಂಗ ಬಂದಿತು.

ಫೋನ್‌ ಕದ್ದಾಲಿಕೆ ಮಾಡಿರುವ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾನು ಯಾವುದೇ ತಪ್ಪು ಮಾಡಿಲ್ಲ. ಯಾವ ತನಿಖೆ ಬೇಕಾದರೂ ಮಾಡಲಿ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ