ಆ್ಯಪ್ನಗರ

ಕೇಂದ್ರದ ಅನುಮತಿ ಪಡೆಯದಿದ್ದಲ್ಲಿ ರೆಸಾರ್ಟ್ಸ್ ಮುಚ್ಚಿಸಲಾಗುವುದು: ಕೋರ್ಟ್‌ ಎಚ್ಚರಿಕೆ

ಕೊಡಗಿನ ದುಬಾರೆ ಮೀಸಲು ಅರಣ್ಯಪ್ರದೇಶಯಲ್ಲಿರುವ ಜಂಗಲ್‌ ಲಾಡ್ಜ್‌ ಮತ್ತು ರೆಸಾರ್ಟ್‌ಗೆ ಕೇಂದ್ರ ಸರಕಾರದಿಂದ ಅಗತ್ಯ ಅನುಮತಿ ಪಡೆದಿಲ್ಲವಾದರೆ ಅದನ್ನು ...

Vijaya Karnataka 4 Jul 2019, 5:00 am
ಬೆಂಗಳೂರು: ಕೊಡಗಿನ ದುಬಾರೆ ಮೀಸಲು ಅರಣ್ಯಪ್ರದೇಶಯಲ್ಲಿರುವ ಜಂಗಲ್‌ ಲಾಡ್ಜ್‌ ಮತ್ತು ರೆಸಾರ್ಟ್‌ಗೆ ಕೇಂದ್ರ ಸರಕಾರದಿಂದ ಅಗತ್ಯ ಅನುಮತಿ ಪಡೆದಿಲ್ಲವಾದರೆ ಅದನ್ನು ಮುಚ್ಚಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ಎಚ್ಚರಿಕೆ ನೀಡಿದೆ.
Vijaya Karnataka Web highcourt


ಕೊಡಗಿನ ವಿರೂಪಾಕ್ಷಪುರದ ಪಿ.ಎಸ್‌. ಮೋಹನ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಸಿಜೆ ಎ.ಎಸ್‌. ಓಕ್‌ ಮತ್ತು ನ್ಯಾ. ಎಚ್‌.ಟಿ. ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ, ರೆಸಾರ್ಟ್‌ಗೆ ಕೇಂದ್ರ ಸರಕಾರದಿಂದ ಅನುಮತಿ ಪಡೆಯಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರಕಾರಿ ವಕೀಲರನ್ನು ಕೇಳಿತು.

ಸರಕಾರಿ ವಕೀಲರು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಜು.9ಕ್ಕೆ ಮುಂದೂಡಿತು. ''ನಿಯಮದಂತೆ ಅರಣ್ಯ ಪ್ರದೇಶದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸುವಂತಿಲ್ಲ, ಒಂದು ವೇಳೆ ನಡೆಸಬೇಕಾದರೂ ಕೇಂದ್ರ ಸರಕಾರದ ಅನುಮತಿ ಕಡ್ಡಾಯ. ಆದರೆ ಜಂಗಲ್‌ ಲಾಡ್ಜ್‌ ಮತ್ತು ರೆಸಾರ್ಟ್‌ಗೆ ಅನುಮತಿ ಪಡೆದಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಹಾಗಾಗಿ ರಾಜ್ಯ ಸರಕಾರ ಅನುಮತಿ ಪಡೆದಿರುವ ಬಗ್ಗೆ ಮಾಹಿತಿ ನೀಡಬೇಕು,'' ಎಂದು ನ್ಯಾಯಾಲಯ ಸೂಚಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಲ್‌.ರಾಜಣ್ಣ ''ಅರಣ್ಯ ಸಂರಕ್ಷಣಾ ಕಾಯಿದೆ 1980ರ ಸೆಕ್ಷನ್‌ 2ರ ಪ್ರಕಾರ ಜಂಗಲ್‌ ಲಾಡ್ಜ್‌ ಮತ್ತು ರೆಸಾರ್ಟ್‌ ಕೇಂದ್ರದಿಂದ ಅನುಮತಿ ಪಡೆಯಬೇಕಿತ್ತು. ಆದರೆ ಯಾವುದೇ ಅನುಮತಿ ಇಲ್ಲದೆ ರೆಸಾರ್ಟ್‌ ನಡೆಸಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಕ್ರಮ ಕೈಗೊಂಡಿಲ್ಲ ''ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ