ಆ್ಯಪ್ನಗರ

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ

ದೇಶದ ಬಹು ಸಂಸ್ಕೃತಿ ನಾಶಗೊಳಿಸುವ ಆಡಳಿತದ ಜತೆಗೆ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

Vijaya Karnataka 16 Aug 2019, 5:00 am
ಬೆಂಗಳೂರು : ದೇಶದ ಬಹು ಸಂಸ್ಕೃತಿ ನಾಶಗೊಳಿಸುವ ಆಡಳಿತದ ಜತೆಗೆ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.
Vijaya Karnataka Web congress


ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ''ಚುನಾವಣಾ ಆಯೋಗ, ಸುಪ್ರೀಂಕೋರ್ಟ್‌ ಸೇರಿದಂತೆ ನಾನಾ ತನಿಖಾ ಸಂಸ್ಥೆಗಳನ್ನೂ ಕೇಂದ್ರ ಸರಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ,'' ಎಂದು ಆಪಾದಿಸಿದರು.

''ಪ್ರಜಾಪ್ರಭುತ್ವದ ಮೌಲ್ಯ ಉಳಿಸಿಕೊಳ್ಳದಿದ್ದರೆ ದೊಡ್ಡ ಅನಾಹುತವಾಗುತ್ತದೆ. ಆಡಳಿತದ ವಿರುದ್ಧ ಕೇಳಿ ಬರುವ ಧ್ವನಿಯನ್ನು ದಮನಗೊಳಿಸಲಾಗುತ್ತಿದೆ. ಇತರ ಪಕ್ಷದ ನಾಯಕರನ್ನು ಮುಗಿಸುವ ಹುನ್ನಾರ ನಡೆಯುತ್ತಿದೆ. ಕೋಮುವಾದದ ಸಿದ್ಧಾಂತ ಪ್ರಾರಂಭವಾಗಿದೆ. ಹಾಗಾಗಿ ಜನರು ಎಚ್ಚೆತ್ತುಕೊಳ್ಳಬೇಕು,'' ಎಂದು ಹೇಳಿದರು.

ತುರ್ತು ಪರಿಸ್ಥಿತಿ

''ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆಯೇನೋ ಎಂಬಂತೆ ಭಾಸವಾಗುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆಯಿಲ್ಲದವರು ಆಡಳಿತದ ಚುಕ್ಕಾಣಿ ಹಿಡಿದಾಗ ಇಂತಹ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಸಂದಿಗ್ಧ ಪರಿಸ್ಥಿತಿಯಿಂದ ದೇಶವನ್ನು ಹೊರತರುವ ಹೊಣೆ ನಮ್ಮೆಲ್ಲರ ಮೇಲಿದೆ,'' ಎಂದು ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕಳಕಳಿ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ