ಆ್ಯಪ್ನಗರ

ಸಿಇಟಿ: ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್‌ ಹಾಗೂ ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬುಧವಾರ ರಾತ್ರಿ ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟಿಸಿದೆ.

Vijaya Karnataka 28 Jun 2018, 7:57 am
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್‌ ಹಾಗೂ ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬುಧವಾರ ರಾತ್ರಿ ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟಿಸಿದೆ.
Vijaya Karnataka Web exam


ಮೊದಲ ಹಂತದಲ್ಲಿ 32 ಕಾಲೇಜುಗಳಲ್ಲಿ ಎಂಜಿನಿಯರಿಂಗ್‌ನಲ್ಲಿ 12,586 ಸೀಟುಗಳು ಲಭ್ಯವಿದ್ದು, ಇದರಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ 10,424, ಹೈದರಾಬಾದ್‌ ಕರ್ನಾಟಕ ಮೀಸಲಾತಿ ಅಭ್ಯರ್ಥಿಗಳಿಗೆ 1666 ಹಾಗೂ ವಿಶೇಷ ಕೋಟಾದ ಅಭ್ಯರ್ಥಿಗಳಿಗೆ 496 ಸೀಟು ಮೀಸಲಿಡಲಾಗಿದೆ. ಆರ್ಕಿಟೆಕ್ಚರ್‌ನಲ್ಲಿ 114 ಸೀಟು, ಬಿಎಸ್ಸಿ ಎಜಿ, ಕೃಷಿ ಹಾಗೂ ಪಶು ಸಂಗೋಪನೆ, ತೋಟಗಾರಿಕೆ ಮತ್ತಿತರ ಕೋರ್ಸ್‌ಗಳಿಗೆ 2847 ಸೀಟುಗಳು ಲಭ್ಯವಿವೆ. ಸದ್ಯದಲ್ಲಿಯೇ ಶುಲ್ಕ ವಿವರ ಹಾಗೂ ಆಪ್ಷನ್‌ ಎಂಟ್ರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಇನ್ನೂ ಅಂತಿಮಗೊಳ್ಳದ ಪ್ರವೇಶ ಶುಲ್ಕ

ಖಾಸಗಿ ಕಾಲೇಜುಗಳಲ್ಲಿನ ಸರಕಾರಿ ಕೋಟಾದ ಎಂಜಿನಿಯರಿಂಗ್‌ ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಖಾಸಗಿ ಕಾಲೇಜಿನ ಆಡಳಿತ ಮಂಡಳಿಗಳು ಹಾಗೂ ಸರಕಾರದ ನಡುವೆ ಎರಡು-ಮೂರು ಸುತ್ತಿನ ಮಾತುಕತೆ ನಡೆದರೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.

''ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ,'' ಎಂದು ಕರ್ನಾಟಕ ರಾಜ್ಯ ಅನುದಾನಿತ ಎಂಜಿನಿಯರಿಂಗ್‌ ಕಾಲೇಜುಗಳ ಸಂಘದ ಕಾರ್ಯದರ್ಶಿ ಎಂ.ಕೆ. ಪಾಂಡುರಂಗಶೆಟ್ಟಿ 'ವಿಕ'ಕ್ಕೆ ತಿಳಿಸಿದರು.

ಒಂದೆರಡು ದಿನಗಳಲ್ಲಿ ಸರಕಾರ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನ ಆಡಳಿತ ಮಂಡಳಿಯ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ