ಆ್ಯಪ್ನಗರ

ದೇವೇಗೌಡ, ಸಿಎಂ ಭೇಟಿ ಮಾಡಿದ ಚಂದ್ರಬಾಬು ನಾಯ್ಡು

ಬಿಜೆಪಿ ವಿರೋಧಿಸುವ ರಾಜಕೀಯ ಪಕ್ಷಗಳ ನಾಯಕರನ್ನು ಒಟ್ಟುಗೂಡಿಸುವ ಪ್ರಯತ್ನ ಮುಂದುವರಿಸಿರುವ ಟಿಡಿಪಿ ನಾಯಕ ಹಾಗೂ ಆಂಧ್ರಪ್ರದೇಶ ಸಿಎಂ ಎನ್‌.ಚಂದ್ರಬಾಬು ನಾಯ್ಡು ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Vijaya Karnataka 22 May 2019, 5:00 am
ಬೆಂಗಳೂರು : ಬಿಜೆಪಿ ವಿರೋಧಿಸುವ ರಾಜಕೀಯ ಪಕ್ಷಗಳ ನಾಯಕರನ್ನು ಒಟ್ಟುಗೂಡಿಸುವ ಪ್ರಯತ್ನ ಮುಂದುವರಿಸಿರುವ ಟಿಡಿಪಿ ನಾಯಕ ಹಾಗೂ ಆಂಧ್ರಪ್ರದೇಶ ಸಿಎಂ ಎನ್‌.ಚಂದ್ರಬಾಬು ನಾಯ್ಡು ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
Vijaya Karnataka Web 21052-PTI5_21_2019_000200A


ದಿಲ್ಲಿಯಲ್ಲಿ ಪ್ರತಿಪಕ್ಷಗಳ ಮುಂಚೂಣಿ ನಾಯಕರಿಗೆ ಚಂದ್ರಬಾಬು ನಾಯ್ಡು ಭೋಜನಕೂಟದ ಬಳಿಕ ವಿಮಾನದಲ್ಲಿ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಚಂದ್ರಬಾಬು ನಾಯ್ಡು ಅವರು ದೇವೇಗೌಡ ಮತ್ತು ಕುಮಾರಸ್ವಾಮಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಲೋಕಸಭೆ ಚುನಾವಣೆ ಫಲಿತಾಂಶ ಗುರುವಾರ ಹೊರಬೀಳುತ್ತಿದ್ದು, ನಂತರದ ರಾಜಕೀಯ ಬೆಳವಣಿಗೆಗಳ ಕುರಿತಂತೆ ದೇವೇಗೌಡರೊಂದಿಗೆ ನಾಯ್ಡು ಮಹತ್ವದ ಸಮಾಲೋಚನೆ ನಡೆಸಿದರು.

ನಿವಾಸಕ್ಕೆ ಆಗಮಿಸಿದ ಚಂದ್ರಬಾಬು ನಾಯ್ಡು ಅವರನ್ನು ದೇವೇಗೌಡರು ಹೊರಗೆ ಬಂದು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಾಯ್ಡು ಅವರು ದೇವೇಗೌಡರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ