ಆ್ಯಪ್ನಗರ

ಗೃಹ ಕಚೇರಿ ಸಿಬ್ಬಂದಿಗೆ ಕೊರೊನಾ, ಕೆಲ ದಿನಗಳ ಕಾಲ ಮನೆಯಲ್ಲೇ ಇರಲು ಬಿಎಸ್‌ವೈ ನಿರ್ಧಾರ

ಗೃಹ ಕಚೇರಿ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಕೆಲ ದಿನಗಳ ಕಾಲ ತಮ್ಮ ನಿವಾಸದಲ್ಲೇ ಉಳಿದುಕೊಳ್ಳಲು ನಿರ್ಧರಿಸಿದ್ದಾರೆ. ಈ ಕುರಿತಾಗಿ ಸಿಎಂ ಕಚೇರಿ ಅಧಿಕೃತ ಹೇಳಿಕೆ ಹೊರಡಿಸಿದೆ.

Vijaya Karnataka Web 10 Jul 2020, 12:54 pm
ಬೆಂಗಳೂರು: ಗೃಹ ಕಚೇರಿ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ನಿರ್ವಹಿಸಲು ಸಿಎಂ ಬಿಎಸ್‌ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ಕುರಿತಾಗಿ ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಯಾರೂ ಆತಂಕ ಪಡುವ ಅಗತ್ಯ ಇಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
Vijaya Karnataka Web bs yeddyurappa


ಸಿಎಂ ಗೃಹ ಕಚೇರಿಯ ಕೆಲ ಸಿಬ್ಬಂದಿಗಳಿಗೆ ಕೋವಿಡ್‌ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬಿಎಸ್‌ವೈ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು. ಈ ಹಿನ್ನೆಲೆಯಲ್ಲಿ ಉಂಟಾಗಿದ್ದ ಗೊಂದಲಗಳಿಗೆ ಅವರು ಇದೀಗ ಸ್ಪಷ್ಟನೆ ನೀಡಿದ್ದಾರೆ.

ರಾಜಧಾನಿಯಲ್ಲಿ ಕೊರೊನಾ ಕಂಟ್ರೋಲ್‌ಗೆ ಹೊಸ ನೀತಿ: ಸಚಿವರು, ಐಎಎಸ್‌ ಅಧಿಕಾರಿಗಳಿಗೆ ಉಸ್ತುವಾರಿ!

ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವಿಡಿಯೋ ಸಂವಾದದ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ವಿನಂತಿ ಮಾಡಿದ್ದಾರೆ.

ನಿಯಂತ್ರಣದಲ್ಲಿ ಕೊರೊನಾ: ಬೆಂಗಳೂರು ಬಿಟ್ಟು ಹೋಗದಂತೆ ಅಶ್ವತ್ಥ ನಾರಾಯಣ ಮನವಿ

ಸಿಎಂ ಬಿಎಸ್‌ವೈ ಗೃಹ ಕಚೇರಿ ಕೃಷ್ಣಾದ ಕೆಲಸ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೆ ವಿಧಾನಸೌಧದಲ್ಲೂ ಕೊರೊನಾ ಆತಂಕ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರದ ಎಲ್ಲಾ ಕಾರ್ಯಕ್ರಮಗಳು ದಿಢೀರ್ ರದ್ದಾಗಿದ್ದವು. ಇದರ ಬೆನ್ನಲ್ಲೇ ಸಿಎಂ ಬೆಂಗಾವಲು ವಾಹನದ ಸಿಬ್ಬಂದಿಗೂ ಸೋಂಕು ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಿದಾಡಿದ್ದವು. ಪರಿಣಾಮ ಸಿಎಂ ಬಿಎಸ್‌ವೈ ಅಧಿಕೃತವಾಗಿ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ