ಆ್ಯಪ್ನಗರ

ಕಮಲ ಪಾಳಯದಲ್ಲಿ ಗೊಂದಲ, ಸಂಸದರ ಸಭೆ ಕರೆದ ಬಿಎಸ್‌ವೈ

ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಬೆಳವಣಿಗೆಗಳ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ ಸಂಸದರ ಸಭೆಯನ್ನು ಕರೆದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 26 Nov 2020, 3:19 pm
ಬೆಂಗಳೂರು: ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಗೊಂದಲ ಹಾಗೂ ಪಕ್ಷದಲ್ಲಿ ತಲೆಧೋರಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಸಂಸದರ ಸಭೆಯನ್ನು ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
Vijaya Karnataka Web BS Yediyurappa


ಸಿಎಂ ಆದ ಬಳಿಕ ಬಿಎಸ್‌ ಯಡಿಯೂರಪ್ಪ ಇದೇ ಮೊದಲ ಬಾರಿಗೆ ಸಂಸದರ ಸಭೆಯನ್ನು ಕರೆದಿದ್ದಾರೆ. ಶುಕ್ರವಾರ ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು ರಾಜ್ಯದ ಎಲ್ಲಾ ಸಂಸದರು ಈ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

'ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಒತ್ತಾಯ ಬಂದಿರುವುದು ನಿಜ';ಸತೀಶ್ ಜಾರಕಿಹೊಳಿ

ಮೇಲ್ನೋಟಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ, ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಹಾಗೂ ಇನ್ನಿತರ ವಿಚಾರಗಳ ಕುರಿತಾಗಿ ಚರ್ಚೆ ಎಂದು ಹೇಳಲಾಗುತ್ತಿದ್ದರು ಸಭೆಯಲ್ಲಿ ಕೆಲವೊಂದು ಮಹತ್ವದ ವಿಚಾರಗಳ ಕುರಿತಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಪ್ರವಾಹ ಪರಿಹಾರ ವಿಳಂಬ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಹದಿಂದ ಭಾರೀ ನಷ್ಟವಾದರೂ ಕೇಂದ್ರದಿಂದ ಸೂಕ್ತ ಪರಿಹಾರ ಇನ್ನೂ ಸಿಕ್ಕಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ ಸರ್ವ ಪಕ್ಷದ ನಿಯೋಗ ಕರೆದುಕೊಂಡು ಹೋಗಿ ಎಂದು ವಿರೋಧ ಪಕ್ಷಗಳು ಆಗ್ರಹ ಮಾಡುತ್ತಿವೆ.

ಇದೇ ಸಂದರ್ಭದಲ್ಲಿ ಸಿಎಂ ಸಂಸದರ ಸಭೆಯನ್ನು ಕರೆದಿರುವ ಉದ್ಧೇಶ ಏನು ಎಂಬುವುದು ಕುತೂಹಲ ಕೆರಳಿಸಿದೆ. ಅದರ ಜೊತೆಗೆ ಸದ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಸಂಸದರನ್ನು ವಿಶ್ವಾಸಕ್ಕೆ ಪಡೆದುಕೊಳ್ಳುವ ಉದ್ದೇಶವೂ ಇದರ ಹಿಂದೆ ಇದೆ ಎನ್ನಲಾಗುತ್ತಿದೆ. ಒಂದು ಕಡೆಯಲ್ಲಿ ಸಂಪುಟ ವಿಸ್ತರಣೆ ಚರ್ಚೆ ಮತ್ತೊಂದು ಕಡೆಯಲ್ಲಿ ನಾಯಕತ್ವ ಬದಲಾವಣೆಯ ಗೊಂದಲದ ನಡುವೆ ಸಂಸದರ ಸಭೆ ತೀವ್ರ ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ