ಆ್ಯಪ್ನಗರ

ಕೊರೊನಾ ಲಾಕ್‌ಡೌನ್: ಸಚಿವರು, ಅಧಿಕಾರಿಗಳ ಜೊತೆಗೆ ಬಿಎಸ್‌ವೈ ಸಭೆ

ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜೊತೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಭಾನುವಾರ ತಮ್ಮ ಸರ್ಕಾರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು.

Vijaya Karnataka Web 12 Jul 2020, 2:07 pm
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳು ಏನು ಎಂಬುವುದರ ಕುರಿತಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಭಾನುವಾರ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಚರ್ಚಿಸಿದರು.
Vijaya Karnataka Web BS Yediyurappa


ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಕೆಲವು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ ಸಿಎಂ ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಕುರಿತಾಗಿ ಚರ್ಚೆ ನಡೆಸಿದರು.

ಕೋವಿಡ್‌ ತಪಾಸಣೆ ಫಲಿತಾಂಶ ವಿಳಂಬ, ಸರ್ಕಾರಕ್ಕೆ ಎಚ್‌ಡಿಕೆ ತರಾಟೆ

ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್, ರಾಜೇಂದ್ರ ಕುಮಾರ್ ಕಠಾರೀಯ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಕೊರೊನಾರ್ಭಟದ ಬೆನ್ನಲ್ಲೇ ಲಾಕ್‌ಡೌನ್‌: ಬೆಂಗಳೂರಿನಿಂದ ಗಂಟು-ಮೂಟೆ ಕಟ್ಟಿದ ಜನ

ಸದ್ಯ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಗಳಿಗೆ ವಿಸ್ತರಣೆ ಮಾಡಬೇಕಾ ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ