ಆ್ಯಪ್ನಗರ

ಬಿಡಿಎ ಸಕ್ರಮೀಕರಣ ಉಪಸಮಿತಿ ಸಭೆಯಲ್ಲಿ ಬೊಕ್ಕಸ ತುಂಬಲು ಅಧಿಕಾರಿಗಳು ಕೊಟ್ಟ ಸಲಹೆ ಏನು?

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬಿಡಿಎ ಸಕ್ರಮೀಕರಣ ಉಪಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಕೆಲವೊಂದು ಮಹತ್ವದ ವಿಚಾರಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ.

Vijaya Karnataka Web 29 Apr 2020, 5:35 pm
ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ಗೃಹ ಕಚೇರಿ ಕಷ್ಣಾದಲ್ಲಿ ಬಿಡಿಎ ಸಕ್ರಮೀಕರಣ ಉಪಸಮಿತಿ ಸಭೆ ನಡೆಯಿತು. ಕೊರೊನಾ ಲಾಕ್‌ಡೌನ್‌ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಸರ್ಕಾರದ ಬೊಕ್ಕಸ ತುಂಬಿಸಲು ಸಭೆಯಲ್ಲಿ ಅಧಿಕಾರಿಗಳು ಕೆಲವೊಂದು ಮಹತ್ವದ ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.
Vijaya Karnataka Web cm meeting


ಬಿಡಿಎ ವ್ಯಾಪ್ತಿಯಲ್ಲಿರುವ ಅಕ್ರಮವಾಗಿ ನಿರ್ಮಿಸಿರುವ ಮನೆಗಳು ಹಾಗೂ ಕಟ್ಟಡಗಳನ್ನು ಸಕ್ರಮದಡಿ ತಂದು ದಂಡ ವಸೂಲಿ ಮಾಡುವುದು, ನಕ್ಷೆ ಉಲ್ಲಂಘಿಸಿರುವ ಪ್ರಕರಣಗಳಿಂದಲೂ ದಂಡ ವಸೂಲಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೋಬ್ರಾ ಕಮಾಂಡೋ ಬಂಧನ ಪ್ರಕರಣ, ಬಸವರಾಜ್‌ ಬೊಮ್ಮಾಯಿ ರಾಜೀನಾಮೆಗೆ ಟ್ವಿಟ್ಟರ್‌ ಅಭಿಯಾನ!

ಇದನ್ನು ತಕ್ಷಣವೇ ಜಾರಿಗೆ ತಂದರೆ ಲಾಕ್ ಡೌನ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆದಾಯ ದೊರಕುವ ಮೂಲಕ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದು ಅಧಿಕಾರಿಗಳು ಸಿಎಂಗೆ ಸಲಹೆ ನೀಡಿದ್ದಾರೆ.

ಸರ್ಕಾರ ಈ ನಿರ್ಧಾರವವನ್ನು ಜಾರಿಗೊಳಿಸಿದರೆ ಸುಮಾರು 50 ಸಾವಿರ ಕೋಟಿಯಷ್ಟು ಆದಾಯ ಸಿಗಬಹುದು ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಕೆಲವು ಹಿರಿಯ ಸಚಿವರು ಇದಕ್ಕೆ ಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸಿದ್ದು ಇದನ್ನು ಜಾರಿಗೊಳಿಸುವುದರಿಂದ ಇಷ್ಟು ಪ್ರಮಾಣದ ಆದಾಯ ನಿರೀಕ್ಷೆ ‌ಮಾಡಲು ಸಾಧ್ಯವೇ ಇಲ್ಲ ಎಂದಿದ್ದಾರೆ ಎಂಬ ಮಾಹಿತಿ ಇದೆ.

ಶೀಘ್ರದಲ್ಲೇ ಕೊರೊನಾ ಗ್ರೀನ್‌ ಝೋನ್‌ ಆಗಲಿದೆ ಮೈಸೂರು: ಚಿಕಿತ್ಸೆ ವಿಧಾನ ವಿವರಿಸಿದ ಡಿಸಿ

ಈ ನಿಟ್ಟಿಲ್ಲಿ ಸಭೆಯಲ್ಲಿ ಯಾವುದೇ ನಿರ್ಧಾರವನ್ನು ಕೈಗೊಳ್ಳಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಸೂಕ್ತ ಪ್ರಸ್ತಾವನೆಯೊಂದಿಗೆ ಬರುವಂತೆ ಬಿಡಿಎ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ,ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ