ಆ್ಯಪ್ನಗರ

ಮಳೆ ಅವಾಂತರ: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಿಂದ ಮಾಹಿತಿ ಪಡೆದುಕೊಂಡ ಬಿಎಸ್‌ವೈ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಭಾನುವಾರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್‌ ಅವರಿಗೆ ಫೋನ್ ಕರೆ ಮಾಡಿ ರಾಜ್ಯದ ಪ್ರವಾಹ ಪರಿಸ್ಥಿಯ ಕುರಿತಾಗಿ ಮಾಹಿತಿ ಪಡೆದುಕೊಂಡರು.

Vijaya Karnataka Web 9 Aug 2020, 12:07 pm
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಯಾಗಿ ಆದ ಅವಘಡಗಳ ಕುರಿತಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರದಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್‌ ಅವರಿಗೆ ಫೋನ್ ಮಾಡಿ ಮಾಹಿತಿ ಪಡೆದುಕೊಂಡರು.
Vijaya Karnataka Web bs yeddyurappa


ರಾಜ್ಯದ ಮಡಿಕೇರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾನವಾಗಿದೆ.

ರಾಜ್ಯ ಸರ್ಕಾರ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ! ಸಿದ್ದರಾಮಯ್ಯ ಕಿಡಿ

ಮಡಿಕೇರಿಯಲ್ಲಿ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹಲವು ಕಡೆಗಳನ್ನು ಭೂಕುಸಿತ ಉಂಟಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಅಪರ ಮುಖ್ಯಕಾರ್ಯದರ್ಶಿಗಳಾದ ರವಿಕುಮಾರ್ ಅವರಿಗೆ ಕರೆ ಮಾಡಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಯ ಬಗ್ಗೆ ಮಾಹಿತಿ ಪಡೆದರು.

ಭಾಗಮಂಡಲದಲ್ಲಿ 3 ದಿನದಲ್ಲಿ 1,010 ಮಿ.ಮೀ. ಮಳೆ! ರಾಜ್ಯದ 5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಈಗಾಗಲೇ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು ಆಯಾ ಜಿಲ್ಲೆಗಳಲ್ಲೇ ಉಳಿದುಕೊಂಡು ಸಚಿವರು ಪ್ರವಾಹ ಪರಿಸ್ಥಿತಿಯನ್ನು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದ್ದಾರೆ. ಕೋವಿಡ್‌ ಕಾರಣಕ್ಕಾಗಿ ಯಡಿಯೂರಪ್ಪನವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆಯಿಂದಲೇ ಸಿಎಂ ಬಿಎಸ್‌ವೈ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದಾರೆ. ಅಧಿಕಾರಿಗಳು ಹಾಗೂ ಸಚಿವರ ಜೊತೆಗೆ ಫೋನ್ ಮೂಲಕ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ