ಆ್ಯಪ್ನಗರ

ಚೈಲ್ಡ್‌ ಸೇಫ್ಟಿ ಲಾಕ್‌ ನಿಷ್ಕ್ರಿಯ ಆದೇಶ ಜಾರಿಗೊಳಿಸದ ಸಾರಿಗೆ ಇಲಾಖೆ: ಸಿಜೆ ಗರಂ

ಆದೇಶ ಹೇಗೆ ಜಾರಿಗೊಳಿಸಬೇಕು ಎಂಬ ಬಗ್ಗೆ ಅಧಿಕಾರಿಗಳಿಗೆ 'ಕ್ಲೂ ' ಇಲ್ಲವೆಂದರೆ? ನಾವೇ ದಾರಿ ತೋರಿಸುತ್ತೇವೆ, ಆದರೆ ಅದಕ್ಕೆ ಅಧಿಕಾರಿಗಳು ತಕ್ಕ ಬೆಲೆ ತೆರಬೇಕಲ್ಲವೇ? ಜೊತೆಗೆ ನೀವು(ಸಾರಿಗೆ ಇಲಾಖೆ) ವಿಫಲವಾಗಿದ್ದೀರಿ ಎಂದೂ ಹೇಳಬೇಕಾಗುತ್ತದೆ ಎಂದು ಪೀಠ ಹೇಳಿತು.

Vijaya Karnataka Web 10 Jan 2019, 8:47 am
ಬೆಂಗಳೂರು: ಕ್ಯಾಬ್‌ಗಳಲ್ಲಿನ ಚೈಲ್ಡ್‌ ಲಾಕ್‌ ವ್ಯವಸ್ಥೆ ನಿಷ್ಕ್ರಿಯಗೊಳಿಸುವ ನಿಯಮದ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಆದರೆ ಜಾರಿಗೆ ಕ್ರಮ ಕೈಗೊಳ್ಳದ ಬಗ್ಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.
Vijaya Karnataka Web hamer


ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ(ಬಿಎಸ್‌ಒಜಿ) ಸಲ್ಲಿಸಿದ್ದ ಅರ್ಜಿಯನ್ನ ಬುಧವಾರ ವಿಚಾರಣೆಗೆ ಎತ್ತಿಕೊಂಡ ಸಿಜೆ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಅರವಿಂದ್‌ ಕುಮಾರ್‌ ಅವರಿದ್ದ ನ್ಯಾಯಪೀಠ ಸಾರಿಗೆ ಇಲಾಖೆ ನಡೆಗೆ ಬೇಸರ ವ್ಯಕ್ತಪಡಿಸಿತು.

ಆಗ ಸರಕಾರಿ ವಕೀಲರು ಹಿಂದೆ ತಿಳಿಸಿದ್ದಂತೆ ನಿಯಮ ತಿದ್ದುಪಡಿ ಮಾಡಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೊಳಿಸುವಂತೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ ಎಂದರು.

ಆಗ ಸಿಟ್ಟಿಗೆದ್ದ ಸಿಜೆ ಸುಮ್ಮನೆ ಆದೇಶ ಹೊರಡಿಸಿದರೆ ಸಾಕೇ? ಅದು ಜಾರಿಯಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವವರು ಯಾರು? ಚೈಲ್ಡ್‌ ಸೇಫ್ಟಿ ಲಾಕ್‌ ತೆಗೆದಿದ್ದಾರೆಯೇ ಇಲ್ಲವೇ ತಿಳಿಯುವುದು ಹೇಗೆ ಎಂದು ಖಾರವಾಗಿ ಪ್ರಶ್ನಿಸಿದರು.

ಆದೇಶ ಹೇಗೆ ಜಾರಿಗೊಳಿಸಬೇಕು ಎಂಬ ಬಗ್ಗೆ ಅಧಿಕಾರಿಗಳಿಗೆ 'ಕ್ಲೂ ' ಇಲ್ಲವೆಂದರೆ? ನಾವೇ ದಾರಿ ತೋರಿಸುತ್ತೇವೆ, ಆದರೆ ಅದಕ್ಕೆ ಅಧಿಕಾರಿಗಳು ತಕ್ಕ ಬೆಲೆ ತೆರಬೇಕಲ್ಲವೇ? ಜೊತೆಗೆ ನೀವು(ಸಾರಿಗೆ ಇಲಾಖೆ) ವಿಫಲವಾಗಿದ್ದೀರಿ ಎಂದೂ ಹೇಳಬೇಕಾಗುತ್ತದೆ ಎಂದು ಪೀಠ ಹೇಳಿತು.

ವಿಚಾರಣೆಯನ್ನು ಜ.23ಕ್ಕೆ ಮುಂದೂಡಿದ ನ್ಯಾಯಪೀಠ, ಅಷ್ಟರಲ್ಲಿ ಆದೇಶ ಜಾರಿಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚನೆ ನೀಡಿತು.

ಅರ್ಜಿದಾರರ ಪರ ಹಿರಿಯ ವಕೀಲೆ ಲಕ್ಷ್ಮೇ ಅಯ್ಯಂಗಾರ್‌ ಚೈಲ್ಡ್‌ ಲಾಕ್‌ ವ್ಯವಸ್ಥೆ ನಿಯಮ ಜಾರಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ