ಆ್ಯಪ್ನಗರ

ಪೌರತ್ವ ಕಾಯ್ದೆ ವಿವಾದ: ಬಿಜೆಪಿಯಿಂದ ಸಿಎಎ ಬೆಂಬಲಿಸಿ ‘ಮಿಸ್ಡ್ ಕಾಲ್’ ಅಭಿಯಾನ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ದೇಶಾದ್ಯಂತ ಹೋರಾಟಗಳು ನಡೆಯುತ್ತಿರುವ ಬೆನ್ನಲ್ಲೇ ಕಾಯ್ದೆ ಬೆಂಬಲಿಸಿ ಬಿಜೆಪಿಯಿಂದ ಮಿಸ್ಡ್‌ ಕಾಲ್ ಅಭಿಯಾನ ಶುರುವಾಗಿದೆ.

Vijaya Karnataka Web 3 Jan 2020, 10:00 am
ಬೆಂಗಳೂರು: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಾಗಿ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಿಜೆಪಿಯಿಂದ ಕಾಯ್ದೆ ಬೆಂಬಲಿಸಿ ಮಿಸ್ಡ್ ಕಾಲ್ ಅಭಿಯಾನ ಆರಂಭಗೊಂಡಿದೆ. ಇಂಡಿಯಾ ಸಪೋರ್ಟ್ ಸಿಎಎ ಎಂಬ ಹ್ಯಾಶ್ ಟ್ಯಾಗ್ ಜೊತೆಗೆ ಅಭಿಯಾನ ಆರಂಭಗೊಂಡಿದ್ದು ಈ ಮೂಲಕ ಕಾಯ್ದೆ ಜಾರಿಗೆ ಜನಾಭಿಪ್ರಾಯ ಮೂಡಿಸುವ ಪ್ರಯತ್ನಕ್ಕೆ ಬಿಜೆಪಿ ಕೈ ಹಾಕಿದೆ.
Vijaya Karnataka Web citizenship amendment act bjp missed call campaign
ಪೌರತ್ವ ಕಾಯ್ದೆ ವಿವಾದ: ಬಿಜೆಪಿಯಿಂದ ಸಿಎಎ ಬೆಂಬಲಿಸಿ ‘ಮಿಸ್ಡ್ ಕಾಲ್’ ಅಭಿಯಾನ


ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಭಾರೀ ಪ್ರಮಾಣದ ಪ್ರತಿಭಟನೆಗಳು ನಡೆಯಿತ್ತಿವೆ. ಕೆಲವೆಡೆ ಹಿಂಸಾಚಾರಗಳು ನಡೆದಿವೆ. ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್‌ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು. ಕಾಯ್ದೆ ವಿರೋಧಿಸಿ ಹೋರಾಟಗಳು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜನರಿಂದ ಬೆಂಬಲ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ಈ ಅಭಿಯಾನವನ್ನು ಶುರುಮಾಡಿದೆ.


ನಿಷೇಧಾಜ್ಞೆ ನಡುವೆಯೂ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ - ಹಲವರ ಬಂಧನ

ಈ ಕುರಿತಾಗಿ ಬಿಜೆಪಿ ಮುಖಂಡರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಅಭಿಯಾನವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ನಿಮ್ಮ ಬೆಂಬಲ ಸೂಚಿಸಲು 8866288662 ನಂಬರ್‌ಗೆ ಮಿಸ್ಡ್ ಕಾಲ್ ನೀಡಿ ಎಂದು ಕರೆ ನೀಡಿದ್ದಾರೆ.

ಪೌರತ್ವ ಪ್ರತಿಭಟನೆ ಹತ್ತಿಕ್ಕುವ ಹಿಂದಿದೆ ರಾಜಕೀಯ ಹುನ್ನಾರ; ಯತೀಂದ್ರ ಸಿದ್ದರಾಮಯ್ಯ ಆಕ್ರೋಶ

ಸಂಸದೆ ಶೋಭಾ ಕರಂದ್ಲಾಜೆ , ಸಚಿವ ಸಿಟಿ ರವಿ ಸೇರಿದಂತೆ ಹಲವರು ಟ್ವೀಟ್ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಗುರುವಾರ ತುಮಕೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಿಎಎ ಕುರಿತಾಗಿ ಕಾಂಗ್ರೆಸ್ ನಿಲುವನ್ನು ಟೀಕಿಸಿದ್ದರು. ಕಾಂಗ್ರೆಸ್‌ಗೆ ತಾಕತ್ತಿದ್ದರೆ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ಮಾಡುವಂತೆ ಸವಾಲು ಹಾಕಿದ್ದರು.


ಈ ನಡುವೆ ಕಾಯ್ದೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿರುವ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಗರದ ಈದ್ಗಾ ಮೈದಾನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಸುಮಾರು 50 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ