ಆ್ಯಪ್ನಗರ

ಪೌರತ್ವ ಮಸೂದೆಗೆ ವಿರೋಧ- ಕೆಪಿಸಿಸಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರಕಾರದ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು ಕೇಂದ್ರ ಸರಕಾರದ ನಡೆಯನ್ನು ಖಂಡಿಸಿದೆ.

Vijaya Karnataka Web 11 Dec 2019, 5:14 pm
ಬೆಂಗಳೂರು: ಕೇಂದ್ರ ಸರಕಾರ ವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿದರು.
Vijaya Karnataka Web citizenship amendment bill congress protest
ಪೌರತ್ವ ಮಸೂದೆಗೆ ವಿರೋಧ- ಕೆಪಿಸಿಸಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ


ಪ್ರತಿಭಟನೆಯಲ್ಲಿ ಮಾತನಾಡಿದ ಈಶ್ವರ್‌ ಖಂಡ್ರೆ, ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಪೌರತ್ವ ಮಸೂದೆ ನಮಗೆ ಬೇಡ. ಮಸೂದೆ ಜಾರಿಯ ಮೂಲಕ ಅಕ್ರಮ ವಲಸಿಗರ ಹೆಸರಿನಲ್ಲಿ ವಂಚನೆ ನಡೆಸಲಾಗುತ್ತಿದೆ. ಪೌರತ್ವ ಕಾಯ್ದೆ ಹೆಸರಿನಲ್ಲಿ ಮುಸ್ಲಿಮರನ್ನು ಹೊರಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರ ಸಂವಿಧಾನದ ಮೇಲೆ ಅಕ್ರಮಣ ಮಾಡೋಕೆ ಹೊರಟಿದೆ. ಕಾಯ್ದೆ ಹೆಸರಿನಲ್ಲಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಂವಿಧಾನದ ಆಶಯಗಳಿಗೆ ಧಕ್ಕೆತರುತ್ತಿದ್ದಾರೆ. ಇದನ್ನ ಜಾತ್ಯಾತೀತ ಪಕ್ಷಗಳು ಒಪ್ಪುವುದಿಲ್ಲ ಎಂದರು.

ಪೌರತ್ವ ತಿದ್ದುಪಡಿ ಕಾಯಿದೆ ರಾಜ್ಯಸಭೆಯಲ್ಲಿ ಮಂಡನೆ: ಹಲವರಿಗೆ ಗೌರವಯುತ ಜೀವನ ಸಿಗಲಿದೆ ಎಂದ ಅಮಿತ್‌ ಶಾ

ಧರ್ಮದ ಆಧಾರದಲ್ಲಿ ಪೌರತ್ವ ನೀಡುವ ಕೇಂದ್ರ ಸರಕಾರದ ವಿವಾದಾತ್ಮಕ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಇದೀಗ ರಾಜ್ಯ ಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಾದ ಚರ್ಚೆ ಕಾವೇರಿದೆ. ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ಕೇಂದ್ರ ಸರಕಾರದ ಮಸೂದೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.


ಮಸೂದೆ ವಿರೋಧಿಸಿ ಅಸ್ಸಾಂ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ದೆಹಲಿಯಲ್ಲೂ ಬಿಜೆಪಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ