ಆ್ಯಪ್ನಗರ

ವಿಧಾನಮಂಡಲ ಅಧಿವೇಶನ ಮುಂದೂಡುವಂತೆ CM-DCM ಮನವಿ

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ನ ಎಲ್ಲ ಸಚಿವರ ರಾಜೀನಾಮೆ ಪಡೆಯುವ ಮೂಲಕ ಸರಕಾರ ಉಳಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದೆ.

Vijaya Karnataka Web 8 Jul 2019, 1:47 pm
ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಇದೇ ಜುಲೈ 12ರಂದು ನಿಗದಿಯಾಗಿರುವ ವಿಧಾನಮಂಡಲ ಅಧಿವೇಶನ ಮುಂದೂಡುವಂತೆ ಮನವಿ ಮಾಡಿದ್ದಾರೆ.
Vijaya Karnataka Web gk


ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ನ ಎಲ್ಲ ಸಚಿವರ ರಾಜೀನಾಮೆ ಪಡೆಯುವ ಮೂಲಕ ಸರಕಾರ ಉಳಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದೆ.

ಬಂಡಾಯ ಶಮನಕ್ಕೆ ಮುಲಾಮು ಹಚ್ಚುವ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ಉಪಹಾರ ಕೂಡ ಆಯೋಜಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕೈ ನಾಯಕರು ಭಾಗಿಯಾಗಿದ್ದರೆ,ಸಚಿವರಾದ ದೇಶಪಾಂಡೆ, ಎಂಟಿಬಿ ನಾಗರಾಜ್, ತುಕಾರಾಂ ಗೈರು ಹಾಜರಾಗಿದ್ದರು.

ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಶತಾಯಗತಾಯ ಸರಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ನ ಎಲ್ಲ (22) ಸಚಿವರು ರಾಜೀನಾಮೆಗೆ ನಿರ್ಧರಿಸಲಾಗಿದೆ. ಸಚಿವರು ರಾಜೀನಾಮೆಗೆ ನಿನ್ನೆ (ಭಾನುವಾರ) ರಾತ್ರಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅಂತೆಯೇ ಜೆಡಿಎಸ್‌ನ ಎಲ್ಲ (9) ಸಚಿವರು ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಕಾಂಗ್ರೆಸ್‌ನ 21 ಸಚಿವರ ರಾಜೀನಾಮೆ ಪಡೆಯಲಾಗಿದ್ದು, ಹೊಸದಾಗಿ ಸಂಪುಟ ರಚಿಸಲಾಗುವುದು. ಅತೃಪ್ತ ಶಾಸಕರ ಸಂಪರ್ಕ ಮಾಡಲಾಗುತ್ತಿದೆ. ಬಿಜೆಪಿಯ ಆಪರೇಷನ್ ಕಮಲ 6ನೇ ಬಾರಿಯೂ ವಿಫಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ