ಆ್ಯಪ್ನಗರ

ಕೊರೊನಾದಿಂದ ಯಡಿಯೂರಪ್ಪ ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಕೋವಿಡ್‌ನಿಂದ ಚೇತರಿಸಿಕೊಂಡಿದ್ದರೂ ಕೆಲವು ದಿನಗಳ ಕಾಲ ಅವರು ಕ್ವಾರಂಟೈನ್‌ಗೆ ಒಳಗಾಗುವ ಸಾಧ್ಯತೆ ಇದೆ. ನಂತರ ಅವರು ಎಂದಿನಂತೆ ತಮ್ಮ ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಗಳನ್ನು ನಿರ್ವಹಿಸಬಹುದು.

Vijaya Karnataka 10 Aug 2020, 5:21 pm
ಬೆಂಗಳೂರು: ಕೊರೊನಾ ವೈರಾಣು ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.
Vijaya Karnataka Web BS Yediyurappa


ಕೋವಿಡ್-19 ನಿಂದ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದ ಯಡಿಯೂರಪ್ಪ ಅವರನ್ನು ವೈದ್ಯರು ಹೂಗುಚ್ಛ ನೀಡಿ ಬೀಳ್ಕೊಟ್ಟರು. ಇದೇ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಧನ್ಯವಾದ ಸಲ್ಲಿಸಿ ಯಡಿಯೂರಪ್ಪ ಆಸ್ಪತ್ರೆಯಿಂದ ನಿರ್ಗಮಿಸಿದರು.


ಯಡಿಯೂರಪ್ಪ ಅವರಿಗೆ ಆಗಸ್ಟ್‌ 2 ರಂದು ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿತ್ತು. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಹೀಗಿದ್ದೂ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರೂ ಅಲ್ಲಿಂದಲೇ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದರು. ಆಸ್ಪತ್ರೆಯ ಸಮವಸ್ತ್ರದಲ್ಲಿದ್ದುಕೊಂಡೇ ಅವರು ಕಡತಗಳಿಗೆ ಸಹಿ ಹಾಕುತ್ತಿದ್ದ ವಿಡಿಯೋ ವೈರಲ್‌ ಆಗಿತ್ತು.ಸಿಎಂ ವರ್ಕ್ ಫ್ರಂ ಹಾಸ್ಪಿಟಲ್‌! ಆಸ್ಪತ್ರೆಯಿಂದಲೇ ಅಧಿಕಾರಿಗಳ ಜೊತೆ ಸಮಾಲೋಚನೆ, ನಿರ್ದೇಶನಯಡಿಯೂರಪ್ಪ ಅವರಿಗೆ ಕೋವಿಡ್‌ ದೃಢಪಟ್ಟ ಮರುದಿನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸೋಂಕು ತಗುಲಿರುವುದು ಖಚಿತಪಟ್ಟಿತ್ತು. ಅವರೂ ಇದೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ