ಆ್ಯಪ್ನಗರ

ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ…!

ಸಿಎಂ ಯಡಿಯೂರಪ್ಪ ಅವರು ನನ್ನ ಹೆಸರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿದ್ದಾರೆ ಎಂದು ನನಗೆ ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲವೆಂದು ನನ್ನ ಭಾವನೆ ಎಂದು ಮಹಾದೇವ ಪ್ರಕಾಶ್ ತಿಳಿಸಿದ್ದಾರೆ.

Vijaya Karnataka Web 25 Oct 2020, 7:26 am
ಬೆಂಗಳೂರು: ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಆಗಿರುವ ಕಾರಣ ತಮ್ಮನ್ನು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸುವುದು ಬೇಡ ಎಂದು ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ಅವರು ಮನವಿ ಮಾಡಿದ್ದಾರೆ.
Vijaya Karnataka Web mahadeva prakash


ಪತ್ರಿಕೋದ್ಯಮದಲ್ಲಿ 46 ವರ್ಷಗಳ ಅನುಭವ ಹೊಂದಿದ್ದೇನೆ. ಸಂಪಾದಕನಾಗಿ, ಅಂಕಣಕಾರನಾಗಿ, ರಾಜಕೀಯ ವಿಶ್ಲೇಷಕನಾಗಿ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿನನ್ನ ಇರುವಿಕೆಯನ್ನು ಪರಿಣಾಮಕಾರಿಯಾಗಿ ಪ್ರದರ್ಶನ ಮಾಡಿದ್ದೇನೆ. ಇದನ್ನು ಪರಿಗಣಿಸಿ ಸಿಎಂ ಯಡಿಯೂರಪ್ಪ ಅವರು ನನ್ನ ಹೆಸರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿದ್ದಾರೆ ಎಂದು ನನಗೆ ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲವೆಂದು ನನ್ನ ಭಾವನೆ ಎಂದು ಮಹಾದೇವ ಪ್ರಕಾಶ್ ತಿಳಿಸಿದ್ದಾರೆ.

ನಾನು ನಿಮ್ಮ ಮನೆ ಮಗಳು, ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ: ಕುಸುಮಾ

ಅಲ್ಲದೇ ಮುಖ್ಯಮಂತ್ರಿಗಳು ನನ್ನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿದ್ದರೂ ಅದಕ್ಕೆ ಸಾರ್ವಜನಿಕವಾಗಿ ತಪ್ಪು ಅಭಿಪ್ರಾಯ ಮೂಡುವ ಸಾಧ್ಯತೆ ಇದೆ ಎಂದಿರುವ ಅವರು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮುಜುಗರಕ್ಕೆ ಗುರಿ ಮಾಡುವುದು ಸರಿಯಲ್ಲಎಂದು ಭಾವಿಸಿದ್ದೇನೆ. ಇದನ್ನು ಅಹಂಕಾರ ಎಂದು ಯಾರೂ ಪರಿಗಣಿಸಬೇಕಿಲ್ಲ. ಅತ್ಯಂತ ವಿನಯಪೂರ್ವಕವಾಗಿ ಕನ್ನಡ ರಾಜ್ಯೊತ್ಸವ ಪ್ರಶಸ್ತಿಯನ್ನು ನಿರಾಕರಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿರುವುದು ಬಿಜೆಪಿ ಅಲ್ಲ 'ಜೆಸಿಬಿ' ಸರಕಾರ - ಬಸವರಾಜ ಹೊರಟ್ಟಿ ಲೇವಡಿ

ರಾಜ್ಯೋತ್ಸವ ಪ್ರಶಸ್ತಿಗಾಗಿ ಎಂದೂ ಲಾಬಿ ಮಾಡಿಲ್ಲ. ಈ ಬಾರಿ ಅಧಿಕಾರದ ಬಲದಿಂದ ಪ್ರಶಸ್ತಿ ಪಡೆದೆ ಎನ್ನುವ ಅಭಿಪ್ರಾಯ ಸಾರ್ವಜನಿಕವಾಗಿ ಮೂಡಬಾರದು. ನಮ್ಮ ನಡೆ ನುಡಿ ಇತರರಿಗೆ ಮಾದರಿ ಆಗಬೇಕೇ ಹೊರತು ಮಾರಕ ಆಗಬಾರದು ಅನ್ನುವ ದೃಷ್ಟಿಯಿಂದ ಪ್ರಶಸ್ತಿ ನಿರಾಕರಿಸುವ ನಿರ್ಧಾರ ಮಾಡಿರುವೆ ಎಂದು ಮಹಾದೇವ ಪ್ರಕಾಶ್ ವಿವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ