ಆ್ಯಪ್ನಗರ

ಸಂತೋಷ್‌, ಕಟೀಲ್‌ ಸಭೆಗೆ ದಿಢೀರ್‌ ಆಗಮಿಸಿದ ಸಿಎಂ ಬಿಎಸ್‌ವೈ

​​ನಗರ ವ್ಯಾಪ್ತಿಯಲ್ಲಿ ಪಕ್ಷದ ಪುನರ್‌ ಸಂಘಟನೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಲ್ಲೇಶ್ವರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಶನಿವಾರ ಮಹತ್ವದ ಸಭೆ ಕರೆಯಲಾಗಿತ್ತು.

Vijaya Karnataka 20 Oct 2019, 6:57 am
ಬೆಂಗಳೂರು: ಪಕ್ಷ ಹಾಗೂ ಸರಕಾರ ಭಿನ್ನ ದಿಕ್ಕಿನತ್ತ ಚಲಿಸುತ್ತಿವೆ ಎಂಬ ಮಾಧ್ಯ ಮ ವರದಿಗಳ ಮಧ್ಯೆಯೇ ಸಿಎಂ ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಹಾಗೂ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಶನಿವಾರ ವೇದಿಕೆ ಹಂಚಿಕೊಂಡಿದ್ದು, ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ಸುದೀರ್ಘ ಕಾಲ ಚರ್ಚೆ ನಡೆಸಿದ್ದಾರೆ.
Vijaya Karnataka Web BSY- Kateel


ನಗರ ವ್ಯಾಪ್ತಿಯಲ್ಲಿ ಪಕ್ಷದ ಪುನರ್‌ ಸಂಘಟನೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಲ್ಲೇಶ್ವರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಶನಿವಾರ ಮಹತ್ವದ ಸಭೆ ಕರೆಯಲಾಗಿತ್ತು. ಸಂಘಟನೆಯ ಜವಾಬ್ದಾರಿ ಹೊಂದಿದ್ದ ಪ್ರತಿಯೊಬ್ಬರಿಗೂ ಆಹ್ವಾನ ನೀಡಲಾಗಿತ್ತು. ಸಂತೋಷ್‌, ಕಟೀಲ್‌, ಡಿಸಿಎಂ ಅಶ್ವತ್ಥ ನಾರಾಯಣ, ತುಳಸಿ ಮುನಿರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪಕ್ಷದ ಕಚೇರಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸುವ ಮೂಲಕ ಅಚ್ಚರಿಗೆ ಕಾರಣರಾದರು. ಮಧ್ಯಾಹ್ನ 4 ಗಂಟೆಯವರೆಗೂ ಸಭೆ ನಡೆದಿದ್ದು, ಬೆಂಗಳೂರು ನಗರಕ್ಕೆ ಸಂಬಂಧಪಟ್ಟ ವಿಚಾರಗಳು ಚರ್ಚೆಯಾಗಿವೆ. ಬೆಂಗಳೂರು ನಗರ ಹಾಗೂ ನಗರ ಜಿಲ್ಲೆಗೆ ಈಗ ಪ್ರತ್ಯೇಕ ಜಿಲ್ಲಾಧ್ಯಕ್ಷರು ಇದ್ದಾರೆ. ಈ ವ್ಯವಸ್ಥೆಯ ಬದಲು ಲೋಕಸಭಾ ಕ್ಷೇತ್ರವಾರು ಜಿಲ್ಲಾಧ್ಯಕ್ಷರ ನೇಮಕ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಹೀಗಾಗಿ ಬೆಂಗಳೂರು, ಉತ್ತರ, ದಕ್ಷಿಣ, ಕೇಂದ್ರಕ್ಕೆ ಪ್ರತ್ಯೇಕ ಅಧ್ಯಕ್ಷರನ್ನು ಮುಂಬರುವ ದಿನಗಳಲ್ಲಿನೇಮಕ ಮಾಡಲು ಚಿಂತನೆ ನಡೆಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ