ಆ್ಯಪ್ನಗರ

ಬಜೆಟ್‌ ಫೈಟ್‌: ಚರ್ಚೆಗೆ ಸಿದ್ಧ ಎಂದ ಎಚ್‌ಡಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್‌ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಂಡಿಸಿದ ಮೊದಲ ಬಜೆಟ್‌ ಬಗ್ಗೆ ಕಾಂಗ್ರೆಸ್ ನಾಯಕರ ಅಸಮಾಧಾನ ವ್ಯಕ್ತವಾಗಿದೆ.

Vijaya Karnataka Web 6 Jul 2018, 8:17 pm
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್‌ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಂಡಿಸಿದ ಮೊದಲ ಬಜೆಟ್‌ ಬಗ್ಗೆ ಕಾಂಗ್ರೆಸ್ ನಾಯಕರ ಅಸಮಾಧಾನ ವ್ಯಕ್ತವಾಗಿದೆ.
Vijaya Karnataka Web hdk


ತಮ್ಮ ಆದ್ಯತೆಯ ಕ್ಷೇತ್ರ ಮತ್ತು ಪ್ರದೇಶಗಳನ್ನು ಮಾತ್ರ ಸಿಎಂ ಕುಮಾರಸ್ವಾಮಿ ಗಮನದಲ್ಲಿರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ, ಬಜೆಟ್ ಮಂಡನೆಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಬಜೆಟ್ ಮಂಡಿಸಲಾಗಿದೆ. ಈ ಬಗ್ಗೆ ಸದನದಲ್ಲಿ ಮತ್ತು ಬಹಿರಂಗವಾಗಿ ಚರ್ಚೆಗೆ ಸಿದ್ಧ ಎಂದು ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಎಚ್‌. ಕೆ. ಪಾಟೀಲ್ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಎಚ್‌. ಡಿ. ಕುಮಾರಸ್ವಾಮಿ, ಎಲ್ಲ ಜಿಲ್ಲೆ ಮತ್ತು ಪ್ರದೇಶಗಳನ್ನು ಗಮನದಲ್ಲಿರಿಸಿಕೊಂಡು ಬಜೆಟ್ ಮಂಡಿಸಲಾಗಿದೆ. ಯಾರನ್ನೂ ಕಡೆಗಣಿಸಲಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಸಿದ್ಧನಿದ್ದೇನೆ ಎಂದಿದ್ದಾರೆ. ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಮತ್ತು ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ, ಅದನ್ನು ಸರಿಪಡಿಸಬೇಕು ಎಂದು ಎಚ್‌. ಕೆ. ಪಾಟೀಲ್ ಪತ್ರ ಬರೆದು ಸಿಎಂರನ್ನು ಒತ್ತಾಯಿಸಿದ್ದರು.

ಸಿಎಂಗೆ ಪತ್ರ ಬರೆದ ಎಚ್‌.ಕೆ.ಪಾಟೀಲ್

ಮತ್ತೊಂದೆಡೆ ಉತ್ತರ ಕರ್ನಾಟಕವನ್ನು ಬಜೆಟ್‌ನಲ್ಲಿ ನಿರ್ಲಕ್ಷಿಸಲಾಗಿದೆ. ಯಾವುದೇ ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ನೀಡಿಲ್ಲ ಎಂದು ಉತ್ತರ ಕರ್ನಾಟಕ ಭಾಗದ ಶಾಸಕರು ಮತ್ತು ಜನತೆ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್‌ ವಿರೋಧಿಸಿ ಶುಕ್ರವಾರ ಉತ್ತರ ಕರ್ನಾಟಕದ ಹಲವೆಡೆ ಪ್ರತಿಭಟನೆ ನಡೆದಿದೆ.

ಕರಾವಳಿಯಲ್ಲೂ ಪ್ರತಿಭಟನೆ


ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ ಎಂದು ಕರಾವಳಿ ಭಾಗದ ಶಾಸಕರು ಆರೋಪಿಸಿದ್ದಾರೆ. ಬಜೆಟ್ ಮಂಡನೆ ಬಳಿಕ ಗುರುವಾರ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದ ಬಿಜೆಪಿ ಶಾಸಕರು, ಶುಕ್ರವಾರ ಪ್ರತಿಭಟನೆ ನಡೆಸಿ, ಸಿಎಂ ಬಜೆಟ್ ಮಂಡನೆಯಲ್ಲಿ ಪ್ರಾದೇಶಿಕ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ