ಆ್ಯಪ್ನಗರ

ಭಾನುವಾರವೂ ಕೊಡಗಿನಲ್ಲಿ ಮುಖ್ಯಮಂತ್ರಿ ಪ್ರವಾಸ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಪ್ರವಾಸ ರದ್ದುಪಡಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರಿಸಲಿದ್ದಾರೆ.

Vijaya Karnataka Web 18 Aug 2018, 8:31 pm
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಪ್ರವಾಸ ರದ್ದುಪಡಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರಿಸಲಿದ್ದಾರೆ.
Vijaya Karnataka Web Coorg hdk


ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ರಸ್ತೆ ಮೂಲಕ ಮಡಿಕೇರಿಗೆ ತೆರಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅಲ್ಲಿನ ಗಂಜಿಕೇಂದ್ರವೊಂದಕ್ಕೆ ತೆರಳಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ನಂತರ ಮಡಿಕೇರಿ ನಗರದಲ್ಲಿ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದರು.

ಮಡಿಕೇರಿ ಬಳಿ ಭೂಕುಸಿತದಿಂದ ಸಿಲುಕಿಕೊಂಡಿರುವ ಸುಮಾರು 60 ಜನರನ್ನು ರಕ್ಷಿಸಲು ಮುಖ್ಯಮಂತ್ರಿ ಪ್ರಯಾಣಿಸಿದ ಹೆಲಿಕಾಪ್ಟರ್ ಬಳಸುವ ಉದ್ದೇಶದಿಂದ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುವ ಉದ್ದೇಶದಿಂದ ಸಿಎಂ ಶನಿವಾರ ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿ, ಭಾನುವಾರವೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ