ಆ್ಯಪ್ನಗರ

ರಾಷ್ಟ್ರೀಕೃತ ಬ್ಯಾಂಕ್ ಸಾಲಮನ್ನಾಗೆ ಸರಕಾರ ಚಿಂತನೆ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ

Vijaya Karnataka Web 17 Jul 2018, 10:07 pm
ಬೀದರ್‌: ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಸಂಬಂಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದರು.
Vijaya Karnataka Web bandeppa


ದಲಿತ ಏಕೀಕರಣ ಸಮಿತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನೂ ಮನ್ನಾ ಮಾಡುವತ್ತ ಸರಕಾರ ಚಿಂತನೆ ನಡೆಸಿದೆ. ಈ ಬಗ್ಗೆಯೂ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಬೀದಿ ಬದಿಯ ವ್ಯಾಪಾರಿಗಳಿಗಾಗಿ ಸಾಲ ನೀಡುವ ಸಲುವಾಗಿ ಬಡವರ ಬಂಧು ಹೆಸರಿನ ಯೋಜನೆಯನ್ನು ಶೀಘ್ರ ಜಾರಿಗೊಳಿಸಲಾಗುತ್ತದೆ. ಈ ಬಗ್ಗೆ ಸಿಎಂ ಚಿಂತನೆ ನಡೆಸಲಾಗಿದೆ ಎಂದು ಬಂಡೆಪ್ಪ ಕಾಶಂಪುರ ಇದೇ ವೇಳೆ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ