ಆ್ಯಪ್ನಗರ

ಎಸ್ಎಸ್ಎಲ್‌ಸಿ ಪರೀಕ್ಷೆ: ಸರಕಾರಿ ಶಾಲೆಗಳ ಉತ್ತಮ ಸಾಧನೆಗೆ ಸಿಎಂ ಹರ್ಷ

ಯಾವುದೇ ಸರಕಾರಿ ಶಾಲೆ ಶೂನ್ಯ ಫಲಿತಾಂಶ ದಾಖಲಿಸದೆ ಇರುವುದು ಹಾಗೂ ಶೇ. 100 ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 102 ರಿಂದ 593ಕ್ಕೆ ಹೆಚ್ಚಳವಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Vijaya Karnataka Web 30 Apr 2019, 8:30 pm
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಸರಕಾರಿ ಶಾಲೆಗಳು ಉತ್ತಮ ಸಾಧನೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.
Vijaya Karnataka Web kumaraswamy..


ಸರಕಾರಿ ಶಾಲೆಗಳ ಮಕ್ಕಳು ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳು ಅತ್ಯುತ್ತಮ ಸಾಧನೆ ತೋರಬಲ್ಲರು ಎಂಬುದಕ್ಕೆ ಇದು ನಿದರ್ಶನ. ಯಾವುದೇ ಸರಕಾರಿ ಶಾಲೆ ಶೂನ್ಯ ಫಲಿತಾಂಶ ದಾಖಲಿಸದೆ ಇರುವುದು ಹಾಗೂ ಶೇ. 100 ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 102 ರಿಂದ 593ಕ್ಕೆ ಹೆಚ್ಚಳವಾಗಿರುವುದು ಹೆಮ್ಮೆಯ ವಿಷಯವಾಗಿದೆ. ಪೋಷಕರು ಸರಕಾರಿ ಶಾಲೆಗಳ ಕುರಿತು ಕೀಳರಿಮೆ ತೊಡೆದು ಒಲವು ತೋರಿಸಲು ಇದು ಪೂರಕವಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಸರಕಾರಿ ಶಾಲೆಗಳಲ್ಲಿ ಫಲಿತಾಂಶ ಉತ್ತಮ ಪಡಿಸಲು ಅಧಿಕಾರಿಗಳು ಕೈಗೊಂಡ ಕ್ರಮಗಳು ಫಲ ನೀಡಿದೆ ಎಂದು ಸಹ ಸಿಎಂ ಕುಮಾರಸ್ವಾಮಿ ಅಧಿಕಾರಿಗಳಿಗೆ ಹಾಗೂ ಸರಕಾರಿ ಶಾಲೆಯ ಶಿಕ್ಷಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ