ಆ್ಯಪ್ನಗರ

ಕೈ ನಾಯಕರ ಜತೆ ಸಿಎಂ ಸಮಾಲೋಚನೆ: ಬುಧವಾರವೇ ವಿಶ್ವಾಸಮತಯಾಚನೆ?

ರಾಜಕೀಯ ಬೆಳವಣಿಗೆಗಳಿಗೆ ಮಂಗಳವಾರದವರೆಗೂ ತುಸು ಬ್ರೇಕ್‌ ಬಿದ್ದಿದೆ. ಸುಪ್ರೀಂ ಕೋರ್ಟ್‌ ಹಾಗೂ ಆ ನಂತರದ ವಿಶ್ವಾಸಮತ ಯಾಚನೆ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Vijaya Karnataka Web 12 Jul 2019, 6:58 pm
ಬೆಂಗಳೂರು: ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಅತೃಪ್ತ ಶಾಸಕರ ರಾಜೀನಾಮೆ ನಂತರ ನಡೆದ ಬೆಳವಣಿಗೆಗಳ ನಂತರ ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಬುಧವಾರವೇ ವಿಶ್ವಾಸಮತಯಾಚಿಸುವುದಾಗಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಇದಕ್ಕೆ ಸ್ಪೀಕರ್‌ ಸಮಯಾವಕಾಶವನ್ನೂ ಕೋರಿದ್ದಾರೆ. ವಿಧಾನಸಭೆ ಕಲಾದ ನಂತರ ಕೆಕೆ ಗೆಸ್ಟ್‌ ಹೌಸ್‌ನಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರ ಜತೆ ಚರ್ಚಿಸಿದರು.

ವಿಶ್ವಾಸಮತಯಾಚನೆ ಕುರಿತು ಉಭಯ ಪಕ್ಷಗಳ ನಾಯಕರು ಸುದೀರ್ಘವಾಗಿ ಚರ್ಚಿಸಿದರು.

ಸಭೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆಸಿ ವೇಣುಗೋಪಾಲ್‌, ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಇದ್ದರು.

ಆದರೆ ಸಭೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾರದೇ ಇರುವುದು ಭಾರಿ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸಭೆಯ ನಂತರ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಖುಷಿ ಖುಷಿಯಾಗಿ ಹೊರಟರು. ವಿಶ್ವಾಸಮತಯಾಚನೆ ಪರೀಕ್ಷೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಅಲ್ಲದೇ ಸಭೆಯಲ್ಲಿ ಕೈ ನಾಯಕರು ಸರಕಾರ ಉಳಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ಮಾಡುವು ಕುರಿತು ಸೂಕ್ತ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ