ಆ್ಯಪ್ನಗರ

ಮೂರು, ನಾಲ್ಕು ದಿನದಲ್ಲಿ ಬಿಜೆಪಿ ಸರಕಾರ: ಬಿಎಸ್‌ವೈ

ಕಾಂಗ್ರೆಸ್ ಶಾಸಕಿ ಲಕ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ, ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಯಾವುದೇ ಪ್ರಯತ್ನ ನಡೆಸಿಲ್ಲ, ಅವರು ಬಿಜೆಪಿಗೆ ಬರುವುದಾಗಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

Vijaya Karnataka Web 14 Jul 2019, 9:15 pm
ಬೆಂಗಳೂರು: ರಾಜಕೀಯವಾಗಿ ಬಿಜೆಪಿಗೆ ಸಕಾರಾತ್ಮಕ ಬೆಳವಣಿಗೆಗಳು ಆಗುತ್ತಿದ್ದು, ಮೂರ‍್ನಾಲ್ಕು ದಿನಗಳಲ್ಲಿ ಶುಭ ಸುದ್ದಿ ದೊರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹದಿನೈದು ಶಾಸಕರು ಈಗಾಗಲೇ ರಾಜೀನಾಮೆ ನೀಡಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂದರು.

ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಬಿಜೆಪಿ ಸರಕಾರ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸಮ್ಮಿಶ್ರ ಸರಕಾರ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೆ, ಸೋಮವಾರವೇ ವಿಶ್ವಾಸಮತ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸದನ ಕಲಾಪ ವ್ಯವಹಾರ ಸಮಿತಿ ಸಭೆ ಸೇರಿ ಸೋಮವಾರವೇ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕೆಂದು ಬಿಎಸ್‌ ಯಡಿಯೂರಪ್ಪ ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ