ಆ್ಯಪ್ನಗರ

ಪಿಎಂ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲ : ಸಿಎಂ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಅಧಿಕೃತ ಸರಕಾರಿ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ನೀಡಿರಲಿಲ್ಲವೆಂದು ಹೇಳಿರುವ ಸಿಎಂ ಎಚ್‌ಡಿ...

Vijaya Karnataka 11 Feb 2019, 5:00 am
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಅಧಿಕೃತ ಸರಕಾರಿ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ನೀಡಿರಲಿಲ್ಲವೆಂದು ಹೇಳಿರುವ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಶಿಷ್ಟಾಚಾರ ಉಲ್ಲಂಘನೆಯ ಪ್ರಶ್ನೆ ಎತ್ತಿದ್ದಾರೆ.
Vijaya Karnataka Web cm no invite
ಪಿಎಂ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲ : ಸಿಎಂ


ಹುಬ್ಬಳ್ಳಿಯ ಕಾರ್ಯಕ್ರಮಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ''ಈವರೆಗೆ ನನಗೆ ಆಮಂತ್ರಣ ಬಂದಿಲ್ಲ. ಈ ವಿಚಾರದಲ್ಲಿ ಮೋದಿ ಸರಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ,'' ಎಂದು ಆರೋಪಿಸಿದರು.

''ರೈಲ್ವೆ ಯೋಜನೆಗಳಿಗೆ ರಾಜ್ಯ ಸರಕಾರ ಶೇ.50 ರಷ್ಟು ಮೊತ್ತ ಭರಿಸುತ್ತದೆ. ಜತೆಗೆ ಭೂಮಿ ನೀಡಲಾಗುತ್ತದೆ. ಅವರ ಪಕ್ಷದ ರಾರ‍ಯಲಿಯಲ್ಲಿ ಪ್ರಧಾನಿ ಭಾಗಿಯಾಗುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ನಡೆದ ಯೋಜನೆಗಳಿಗೆ ಚಾಲನೆ ಕೊಡುವಾಗ ರಾಜ್ಯದ ಮುಖ್ಯಮಂತ್ರಿಗೆ ಆಹ್ವಾನ ನೀಡುವುದು ಸೌಜನ್ಯ,'' ಎಂದು ಅಸಮಧಾನ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ