ಆ್ಯಪ್ನಗರ

ನನಗೆ ಅಡ್ಜಸ್ಟ್‌ಮೆಂಟ್‌ ರಾಜಕಾರಣ ಹೇಳಿಕೊಟ್ಟವರೇ ಬಿಜೆಪಿಯವರು ಎಂದ ಸಿಎಂ

ನೈಸ್‌ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದ ಕುಮಾರಸ್ವಾಮಿ ಅವರು ಸಿಎಂ ಆದ ಬಳಿಕ ಅಡ್ಜಸ್ಟ್‌ಮೆಂಟ್‌ ರಾಜಕಾರಣಕ್ಕೆ ಒಗ್ಗಿಕೊಂಡಿದ್ದಾರೆ ಎಂಬ ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ''ಅಡ್ಜಸ್ಟ್‌ಮೆಂಟ್‌ ರಾಜಕಾರಣವನ್ನು ನನಗೆ ಹೇಳಿಕೊಟ್ಟವರೇ ಬಿಜೆಪಿಯವರು.

Vijaya Karnataka Web 17 Nov 2018, 9:32 am
ಬೆಂಗಳೂರು: ವಿವಾದಿತ ಬಿಎಂಐಸಿ ಯೋಜನೆ ಅಕ್ರಮಕ್ಕೆ ಸಂಬಂಧಿಸಿದಂತೆ ನೈಸ್‌ ಕಂಪನಿ ವಿರುದ್ಧ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web hdk


''ನೈಸ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸದನ ಸಮಿತಿ ವರದಿ ಇನ್ನೂ ಅಂಗೀಕಾರವಾಗಿಲ್ಲ. ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು ಐದೂವರೆ ತಿಂಗಳಷ್ಟೇ ಕಳೆದಿದ್ದು, ಸ್ವಲ್ಪ ಸಮಯಾವಕಾಶ ಬೇಕು,'' ಎಂದು ಸ್ಪಷ್ಟಪಡಿಸಿದರು.

ನೈಸ್‌ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದ ಕುಮಾರಸ್ವಾಮಿ ಅವರು ಸಿಎಂ ಆದ ಬಳಿಕ ಅಡ್ಜಸ್ಟ್‌ಮೆಂಟ್‌ ರಾಜಕಾರಣಕ್ಕೆ ಒಗ್ಗಿಕೊಂಡಿದ್ದಾರೆ ಎಂಬ ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ 'ಅಡ್ಜಸ್ಟ್‌ಮೆಂಟ್‌ ರಾಜಕಾರಣವನ್ನು ನನಗೆ ಹೇಳಿಕೊಟ್ಟವರೇ ಬಿಜೆಪಿಯವರು. ಹಿಂದೆ 2006ರಲ್ಲಿ ನೈಸ್‌ ಕಂಪನಿಯ ಯೋಜನೆಯನ್ನು ಸರಕಾರದ ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದಾಗ ಅಂದಿನ ಮಿತ್ರಪಕ್ಷ ಬಿಜೆಪಿಯ ಸ್ನೇಹಿತರು ಸಚಿವ ಸಂಪುಟ ಸಭೆಯಿಂದಲೇ ಹೊರಗುಳಿದರು. ಇಂಥವರಿಂದ ನಾನು ಪಾಠ ಹೇಳಿಸಿಕೊಳ್ಳಬೇಕಿಲ್ಲ. ಅಡ್ಜಸ್ಟ್‌ಮೆಂಟ್‌ನ ಅಗತ್ಯ ನನಗಿಲ್ಲ,' ಎಂದರು.

''ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಪ್ರತಿಯೊಂದು ವಿಚಾರಗಳಲ್ಲೂ ನನ್ನ ನಿರ್ಧಾರ ಮತ್ತು ಕಾರ್ಯಕ್ರಮಗಳ ಮೂಲಕವೇ ಟೀಕಾಕಾರರಿಗೆ ಉತ್ತರ ಕೊಡುತ್ತಾ ಹೋಗುತ್ತೇನೆ. ಅದಕ್ಕಾಗಿ ಸ್ವಲ್ಪ ಸಮಯಾವಕಾಶ ಬೇಕು,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ