ಆ್ಯಪ್ನಗರ

ಸಚಿವ ಸಂಪುಟದ ಬಗ್ಗೆ ಶನಿವಾರ ಹೈ ಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್‌ ಸಾಧ್ಯತೆ: ಬಿಎಸ್‌ವೈ

ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಬಿಎಸ್‌ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆಸಿದ್ದೇನೆ. ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನಡೆಸಿ ತಿಳಿಸುವುದಾಗಿ ಹೇಳಿದ್ದಾರೆ. ಶನಿವಾರ ಈ ನಿಟ್ಟಿನಲ್ಲಿ ಸೂಚನೆ ಕೊಡುವ ಸಾಧ್ಯತೆ ಇದೆ.

Agencies 19 Sep 2020, 9:42 am
ಹೊಸದಿಲ್ಲಿ: ಈ‌ ಬಾರಿಯ ದೆಹಲಿ ಪ್ರವಾಹ ಬಹುತೇಕ ಯಶಸ್ವಿಯಾಗಿದೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದರು. ಶುಕ್ರವಾರದ ದೆಹಲಿ ಭೇಟಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಎಸ್‌ವೈ, ಶುಕ್ರವಾರ ಪ್ರಧಾನಿ ಮೋದಿ ಜೊತೆಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ರಾಜ್ಯದ ಅಭಿವೃದ್ಧಿ ವಿಚಾರದ ಬೇಡಿಕೆಗಳಿಗೆ ಪ್ರಧಾನಿ ಸೇರಿದಂತೆ ಬಹುತೇಕ ಸಚಿವರು ಒಪ್ಪಿಗೆ ಕೊಡುವುದಾಗಿ ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
Vijaya Karnataka Web Karnataka CM BS Yediyurappa
Karnataka CM BS Yediyurappa


ಸಂಪುಟ ವಿಸ್ತರಣೆ ವಿಚಾರ!
ಇನ್ನು ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಬಿಎಸ್‌ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆಸಿದ್ದೇನೆ. ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನಡೆಸಿ ತಿಳಿಸುವುದಾಗಿ ಹೇಳಿದ್ದಾರೆ. ಶನಿವಾರ ಈ ನಿಟ್ಟಿನಲ್ಲಿ ಸೂಚನೆ ಕೊಡುವ ಸಾಧ್ಯತೆ ಇದೆ.

ಅವರ ಸೂಚನೆ ಆಧಾರಿಸಿ ಕ್ಯಾಬಿನೆಟ್ ವಿಸ್ತರಣೆ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು. ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಮಾಡಬೇಕು ಎಂಬುವುದು ನನ್ನ ಇರಾದೆ ಎಂದು ಬಿಎಸ್‌ ಯಡಿಯೂರಪ್ಪ ತಿಳಿಸಿದರು. ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಸಚಿವ ಸಂಪುಟ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದರು.

ಕಾಡಿಬೇಡಿ ಮೋದಿ ಭೇಟಿಗೆ ಪಡೆದ ಅವಕಾಶ ಕುರ್ಚಿ ಗಟ್ಟಿಗೆ ಬಳಸದಿರಿ, ಬಿಎಸ್‌ವೈಗೆ ಸಿದ್ದು ಟಾಂಗ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ