ಆ್ಯಪ್ನಗರ

ಸಹಕಾರ ಸಂಘದ ಚುನಾವಣೆ ವಿಳಂಬ, ಜಿಟಿಡಿಗೆ ನೋಟಿಸ್‌

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಆಡಳಿತ ಮಂಡಳಿ ಸದಸ್ಯರ ಚುನಾವಣೆ ವಿಳಂಬ ಸಂಬಂಧ ಹೈಕೋರ್ಟ್‌ ಸೊಸೈಟಿಯ ಆಡಳಿತಾಧಿಕಾರಿ ಮತ್ತು ಉನ್ನತ ಶಿಕ್ಷ ಣ ಸಚಿವ ಜಿ.ಟಿ.ದೇವೇಗೌಡ ಮತ್ತಿತರರಿಗೆ ತುರ್ತು ನೋಟಿಸ್‌ ಜಾರಿಗೊಳಿಸಿದೆ.

Vijaya Karnataka 5 Jul 2019, 5:00 am
ಬೆಂಗಳೂರು : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಆಡಳಿತ ಮಂಡಳಿ ಸದಸ್ಯರ ಚುನಾವಣೆ ವಿಳಂಬ ಸಂಬಂಧ ಹೈಕೋರ್ಟ್‌ ಸೊಸೈಟಿಯ ಆಡಳಿತಾಧಿಕಾರಿ ಮತ್ತು ಉನ್ನತ ಶಿಕ್ಷ ಣ ಸಚಿವ ಜಿ.ಟಿ.ದೇವೇಗೌಡ ಮತ್ತಿತರರಿಗೆ ತುರ್ತು ನೋಟಿಸ್‌ ಜಾರಿಗೊಳಿಸಿದೆ.
Vijaya Karnataka Web co operative socity election delay gtd get notice
ಸಹಕಾರ ಸಂಘದ ಚುನಾವಣೆ ವಿಳಂಬ, ಜಿಟಿಡಿಗೆ ನೋಟಿಸ್‌


ಸೊಸೈಟಿ ಆಡಳಿತ ಮಂಡಳಿ ಸದಸ್ಯ ಮೈಸೂರಿನ ಎಸ್‌.ಚಂದ್ರಶೇಖರ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಸ್‌.ಎನ್‌.ಸತ್ಯನಾರಾಯಣ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತು.

ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಾಲಯ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಸಹಕಾರ ಸಂಘಗಳ ಸೊಸೈಟಿಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರೂ ಸೇರಿ ಒಟ್ಟು ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿತು.

ಅರ್ಜಿದಾರರ ಪರ ವಕೀಲರು, '' ಆಡಳಿತ ಮಂಡಳಿ ಚುನಾವಣೆಯಲ್ಲಿ ಹುಣಸೂರು ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಪರವಾಗಿ ಮತದಾನ ಮಾಡುವ ಅಥವಾ ಸ್ಪರ್ಧಿಸುವ ಅರ್ಹತೆಯನ್ನು ಜಿ.ಟಿ.ದೇವೇಗೌಡರ ಪುತ್ರ ಹರೀಶ್‌ ಜಿ.ಟಿ.ದೇವೇಗೌಡ ಕಳೆದುಕೊಂಡಿರುವ ಕಾರಣ, ಚುನಾವಣೆ ವಿಳಂಬ ಮಾಡಲಾಗುತ್ತಿದೆ,'' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ