ಆ್ಯಪ್ನಗರ

ಕೆಪಿಸಿಸಿ ಪದಾಧಿಕಾರಿಗಳ ನೇಮಕಕ್ಕೆ ಪೈಪೋಟಿ: ಸಿದ್ದರಾಮಯ್ಯ, ಡಿಕೆಶಿಯಿಂದ ಪ್ರತ್ಯೇಕ ಪಟ್ಟಿ!

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಶೀತಲ ಸಮರ ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳ ನೇಮಕದ ವಿಚಾರದಲ್ಲಿಯೂ ಮುಂದುವರಿದಿದೆ. ಇಬ್ಬರೂ ತಮ್ಮ ಬೆಂಬಲಿಗರ ನೇಮಕಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 24 Jun 2021, 6:23 pm

ಹೈಲೈಟ್ಸ್‌:

  • ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮುಂದುವರಿದ ಶೀತಲ ಸಮರ
  • ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳ ನೇಮಕದ ವಿಚಾರದಲ್ಲಿಯೂ ಇಬ್ಬರ ನಡುವೆ ಪೈಪೋಟಿ
  • ನೂತನವಾಗಿ ನೇಮಕ ಮಾಡಬೇಕಾಗಿರುವ ರಾಜ್ಯ ಪದಾಧಿಕಾರಿಗಳಲ್ಲಿ ತಮ್ಮ ಬೆಂಬಲಿಗರ ನೇಮಕಕ್ಕೆ ಇಬ್ಬರಿಂದಲೂ ಪ್ರಯತ್ನ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Siddaramaiah and DK Shivakumar
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಶೀತಲ ಸಮರ ಮುಂದುವರಿದಿದೆ. ನೂತನವಾಗಿ ನೇಮಕ ಮಾಡಬೇಕಾಗಿರುವ ರಾಜ್ಯ ಪದಾಧಿಕಾರಿಗಳಲ್ಲಿ ತಮ್ಮ ಬೆಂಬಲಿಗರ ನೇಮಕಕ್ಕೆ ಇಬ್ಬರು ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಹೈಕಮಾಂಡ್ ಗೆ ಡಿಕೆಶಿ ಒಂದು ಪಟ್ಟಿಯನ್ನು ಸಲ್ಲಿಸಿದ್ದಾರೆ. ಇದೀಗ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೂ ಹೆಸರುಗಳನ್ನು ಸಲ್ಲಿಸುವಂತೆ ತಿಳಿಸಿದೆ.
ಕೆಲ ದಿನಗಳ ಹಿಂದೆ ದೆಹಲಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷರು ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದರು. ಈ ಪಟ್ಟಿಯಲ್ಲಿ ಬಹುತೇಕ ಶಿವಕುಮಾರ್‌ ಬೆಂಬಲಿಗರೇ ಇದ್ದಾರೆ ಎನ್ನಲಾಗಿದೆ.

'ಮುಂದಿನ ಮುಖ್ಯಮಂತ್ರಿ' ಬಗ್ಗೆ ಹೇಳಿಕೆ ಕೊಡಬೇಡಿ! ಶಾಸಕರಲ್ಲಿ ಸಿದ್ದರಾಮಯ್ಯ ಮನವಿ
ಆದರೆ ಸಿದ್ದರಾಮಯ್ಯ ಅವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೂ ತಮ್ಮ ಅಭ್ಯರ್ಥಿಗಳ ಪಟ್ಟಿ ಸಲ್ಲಿಸುವಂತೆ ಹೈಕಮಾಂಡ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಒಂದೆರಡು ದಿನಗಳಲ್ಲಿ ತಮ್ಮ ಪಟ್ಟಿಯನ್ನು ಸಲ್ಲಿಸುವ ಸಾಧ್ಯತೆ ಇದೆ.

ಗೆದ್ದವರಲ್ಲದೆ, ಸೋತವರು ಕೂಡ ಸಿಎಂ ಆದ ಇತಿಹಾಸ ಇದೆ! ಡಿ.ಕೆ. ಶಿವಕುಮಾರ್‌
ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳ ಘಟಕವನ್ನು ರದ್ದು ಪಡಿಸಲಾಗಿತ್ತು. ಆ ಬಳಿಕ ಹೊಸತಾಗಿ ಪದಾಧಿಕಾರಿಗಳ ನೇಮಕ ಆಗಿರಲಿಲ್ಲ. ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಸೂಚಿಸಿದ ಹೆಸರನ್ನು ಚುನಾವಣಾ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂದು ರಾಹುಲ್ ಗಾಂಧಿ ಈಗಾಗಲೇ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಮ್ಮ ಬೆಂಬಲಿಗರನ್ನೇ ಪದಾಧಿಕಾರಿಗಳನ್ನಾಗಿ ನೇಮಿಸುವ ಪ್ರಯತ್ನಗಳು ಉಭಯ ನಾಯಕರಿಂದ ನಡೆಯುತ್ತಿವೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ