ಆ್ಯಪ್ನಗರ

ಧರ್ಮ ಪ್ರಚಾರದಲ್ಲಿ ತೊಡಗಿದ್ದ 19 ವಿದೇಶಿಯರಿಗೆ ಷರತ್ತುಬದ್ಧ ಜಾಮೀನು

ಆರೋಪಿಗಳು ಪ್ರವಾಸಿ ವೀಸಾದ ಮೇಲೆ ದಿಲ್ಲಿಗೆ ಬಂದು ಜಮಾತ್‌ ಧರ್ಮ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ನಂತರ ಬೆಂಗಳೂರಿಗೆ ಬಂದು ಪಾದರಾಯನಪುರದ ಪ್ರಾರ್ಥನಾ ಮಂದಿರದಲ್ಲಿ ಆಶ್ರಯ ಪಡೆದಿದ್ದರು.

Vijaya Karnataka 16 Jul 2020, 7:00 pm
ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಧರ್ಮ ಪ್ರಚಾರದಲ್ಲಿ ತೊಡಗಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದ 19 ವಿದೇಶಿಯರಿಗೆ ನಗರದ 37ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
Vijaya Karnataka Web Court


ಜಾಮೀನು ಕೋರಿ ಅಹ್ಮದ್‌ ಜೈನಿ ಮತ್ತು ಮಹ್ಮದ್‌ ಫೈಸಲ್‌ ಸೇರಿ ಇಂಡೋನೇಷ್ಯಾದ 10 ಮತ್ತು ಕಜಕಿಸ್ತಾನದ 9 ಮಂದಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಪುರಸ್ಕರಿಸಿದ ಎಸಿಎಂಎಂ ನ್ಯಾಯಾಲಯ, ಷರತ್ತುಬದ್ಧ ಜಾಮೀನು ನೀಡಿದೆ.

ಆರೋಪಿಗಳಿಗೆ ತಲಾ ಒಂದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ನೀಡಬೇಕು. ಹಾಗೆಯೇ, 10 ಸಾವಿರ ರೂ. ನಗದು ಅಥವಾ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಇದೇ ಮಾದರಿಯ ಪ್ರಕರಣಗಳಲ್ಲಿ ಭಾಗಿಯಾಗಬಾರದು. ವಿಚಾರಣಾ ನ್ಯಾಯಾಲಯd ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ನ್ಯಾಯಾಲಯ ಆರೋಪಿಗಳಿಗೆ ಷರತ್ತು ವಿಧಿಸಿದೆ.

ಅಲ್ಲದೆ, ಜೈಲಿನಿಂದ ಬಿಡುಗಡೆ ಮಾಡಿದ ನಂತರ ತನಿಖಾಧಿಕಾರಿಗಳು ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ಪೂರ್ಣಗೊಳ್ಳುವವರೆಗೆ ಬೆಂಗಾವಲಿನೊಂದಿಗೆ ಡಿಟೆನ್ಷನ್‌ ಕೇಂದ್ರ ಅಥವಾ ಇತರೆ ಯಾವುದಾದರೂ ಪ್ರದೇಶದಲ್ಲಿ ಇರಿಸಬೇಕು ಎಂದು ನಿರ್ದೇಶಿಸಿದೆ.

ಆರೋಪಿಗಳು ಪ್ರವಾಸಿ ವೀಸಾದ ಮೇಲೆ ದೆಹಲಿಗೆ ಬಂದು ಜಮಾತ್‌ ಧರ್ಮ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ನಂತರ ಬೆಂಗಳೂರಿಗೆ ಬಂದು ಪಾದರಾಯನಪುರದ ಪ್ರಾರ್ಥನಾ ಮಂದಿರದಲ್ಲಿ ಆಶ್ರಯ ಪಡೆದಿದ್ದರು. ಭಾರತೀಯ ವಿದೇಶಾಂಗ ಕಾಯಿದೆ ಉಲ್ಲಂಘನೆ ಮತ್ತು ಧರ್ಮ ಪ್ರಚಾರದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಜೆ.ಜೆ.ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು. ವಿಚಾರಣಾ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ