ಆ್ಯಪ್ನಗರ

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಿ: ಯಡಿಯೂರಪ್ಪಗೆ ಕಾಂಗ್ರೆಸ್‌ ಆಗ್ರಹ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿದ್ದಂತಹ ಸಂದರ್ಭದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್‌ ಆಗ್ರಹಿಸಿದೆ.

Vijaya Karnataka Web 14 Aug 2019, 7:39 pm
Vijaya Karnataka Web ಕಾಂಗ್ರೆಸ್‌
ಕಾಂಗ್ರೆಸ್‌
ಬೆಂಗಳೂರು: ಸರಕಾರದ ಸಾಧನೆಯನ್ನು ಹೇಳಿಕೊಂಡಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಧೋರಣೆಗೆ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ರಾಜ್ಯದ ಜನತೆಯ ಆಶಯದಂತೆ ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಅಭಿವೃದ್ಧಿಯೇ ನಮ್ಮ ಗುರಿ. ಅಭಿವೃದ್ಧಿ ಯೋಜನೆಗಳ ಅನುಷ್ಠಾನವೇ ನಮ್ಮ ಆದ್ಯತೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ನಾಡಿನ ಜನತೆಗೆ ತಿಳಿಸಿದ್ದಾರೆ.

ತೀವ್ರ ಪ್ರಕೃತಿ ವಿಕೋಪದಿಂದ ನೊಂದ ರೈತರೂ ಸೇರಿ ಎಲ್ಲಾ ಸಂತ್ರಸ್ತರಿಗೆ ನೆರವಾಗುವುದು ಸರಕಾರದ ಮೊದಲ ಆದ್ಯತೆಯಾಗಿರುವುದಾಗಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ತೀವ್ರ ಅಸಮಾಧಾನ ವ್ಯಕ್ತ ಪಡಿಸಿರುವ ಕಾಂಗ್ರೆಸ್‌ ಬಿಎಸ್‌ ಯಡಿಯೂರಪ್ಪ ಅವರದು ತಿರುಕನ ಶೋಕಿ ಎಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೆರೆ ವೀಕ್ಷಣೆಗೆ ಬಂದಿಲ್ಲ. ರಾಷ್ಟ್ರೀಯ ವಿಪತ್ತೆಂದು ಘೋಷಣೆ ಮಾಡಿಲ್ಲ. 5000 ಕೋಟಿ ರೂ. ಹಣ ಬಿಡುಗಡೆ ಮಾಡಿಲ್ಲ ಎಂದು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತ ಪಡಿಸಿದೆ.

ಮಂತ್ರಿ ಮಂಡಲ ರಚಿಸದೆ, ಕೆಲಸ ಮಾಡದೆ, ದುಂದು ವೆಚ್ಚ ಮಾಡುತ್ತಿರುವುದು ನೆರೆಯಿಂದ ಸಂಕಷ್ಟದಲ್ಲಿರುವ ಲಕ್ಷಾಂತರ ಜನತೆಗೆ ಅವಮಾನ ಮಾಡಿದಂತೆ ಎಂದು ಕಾಂಗ್ರೆಸ್‌ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ