ಆ್ಯಪ್ನಗರ

ನಾಲ್ವರು ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಕಾಂಗ್ರೆಸ್‌ ಮನವಿ

ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವಂತೆ ನೀಡಿದ್ದ ವಿಪ್‌ ಉಲ್ಲಂಘನೆ ಮಾಡಲಾಗಿದೆ. ಉಲ್ಲಂಘನೆಗೆ ಸ್ಪಷ್ಟನೆ ನೀಡುವಂತೆ ಕಳುಹಿಸಲಾಗಿದ್ದ ಪತ್ರಕ್ಕೂ ಸಮರ್ಪಕ ಉತ್ತರ ನೀಡಿಲ್ಲ. ಬಜೆಟ್‌ ಅಧಿವೇಶನಕ್ಕೂ ಹಾಜರಾಗಿಲ್ಲ ಎಂದು ದೂರು ಸಲ್ಲಿಸಲಾಗಿದೆ.

Vijaya Karnataka Web 11 Feb 2019, 4:39 pm
ಬೆಂಗಳೂರು: ಪಕ್ಷದ ಸೂಚನೆ, ವಿಪ್‌ ಸೇರಿದಂತೆ ಎಲ್ಲ ಆದೇಶಗಳನ್ನು ತಿರಸ್ಕರಿಸಿರುವ ಕಾಂಗ್ರೆಸ್‌ನ ನಾಲ್ವರು ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ದೂರು ಸಲ್ಲಿಸಿದ್ದಾರೆ.
Vijaya Karnataka Web ಸ್ಪೀಕರ್‌ಗೆ ದೂರು
ಸ್ಪೀಕರ್‌ಗೆ ದೂರು


ಸೋಮವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌, ಕೃಷ್ಣ ಭೈರೇಗೌಡ, ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ದೂರು ಸಲ್ಲಿಸಿದರು.

ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವಂತೆ ನೀಡಿದ್ದ ವಿಪ್‌ ಉಲ್ಲಂಘನೆ ಮಾಡಲಾಗಿದೆ. ಉಲ್ಲಂಘನೆಗೆ ಸ್ಪಷ್ಟನೆ ನೀಡುವಂತೆ ಕಳುಹಿಸಲಾಗಿದ್ದ ಪತ್ರಕ್ಕೂ ಸಮರ್ಪಕ ಉತ್ತರ ನೀಡಿಲ್ಲ. ಬಜೆಟ್‌ ಅಧಿವೇಶನಕ್ಕೂ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ, ಉಮೇಶ್‌ ಜಾಧವ್‌ ಮತ್ತು ಬಿ. ನಾಗೇಂದ್ರ ಅವರನ್ನು ಅನರ್ಹಗೊಳಿಸುವಂತೆ ಸಿದ್ದರಾಮಯ್ಯ ದೂರು ಸಲ್ಲಿಸಿದ್ದಾರೆ.

ದೂರು ಸಲ್ಲಿಸುವ ಮುನ್ನ ಸಿದ್ದರಾಮಯ್ಯ ಅವರು ವಕೀಲರು ಮತ್ತು ತಂಡದಿಂದ ಕಾನೂನು ಸಲಹೆ ಪಡೆದಿದ್ದಾರೆ.

ದೂರು ಸಮೇತ ಸುಮಾರು 80ಕ್ಕೂ ಹೆಚ್ಚು ಪುಟಗಳ ವರದಿಯನ್ನೂ ಸ್ಪೀಕರ್‌ಗೆ ಸಲ್ಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ