ಆ್ಯಪ್ನಗರ

ಎಚ್‌ ಕೆ ಪಾಟೀಲ್‌ಗೆ ಹೈಕಮಾಂಡ್ ಬುಲಾವ್: ಹೆಚ್ಚಿದ ಪ್ರತಿಪಕ್ಷ ನಾಯಕ ಯಾರೆಂಬ ಕೌತಕ

ಹೈಕಮಾಂಡ್ ಬುಲಾವ್‌ ಆಧರಿಸಿ ಎಚ್‌.ಕೆ.ಪಾಟೀಲ್‌ ದಿಲ್ಲಿಗೆ ದೌಡಾಯಿಸಿದ್ದಾರೆ. ಜತೆಗೆ, ಪ್ರತಿಪಕ್ಷ ನಾಯಕನ ಕುರಿತು ಅಭಿಪ್ರಾಯ ಸಂಗ್ರಹಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್‌ ಮಿಸ್ತ್ರಿ ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

Vijaya Karnataka 5 Oct 2019, 7:30 am
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರ ಹಣಾಹಣಿ ನಿರ್ಣಾಯಕ ಘಟ್ಟ ತಲುಪಿದ್ದು, ಈ ತಿಂಗಳ 10ರಿಂದ ಆರಂಭವಾಗಲಿರುವ ಅವೇಶನದೊಳಗೆ ಪ್ರತಿಪಕ್ಷ ನಾಯಕನ ಆಯ್ಕೆ ಖಚಿತವಾಗಿದೆ.
Vijaya Karnataka Web hkp


ಎಐಸಿಸಿ ನಾಯಕರ ಬುಲಾವ್‌ ಆಧರಿಸಿ ಎಚ್‌.ಕೆ.ಪಾಟೀಲ್‌ ದಿಲ್ಲಿಗೆ ದೌಡಾಯಿಸಿದ್ದಾರೆ. ಜತೆಗೆ, ಪ್ರತಿಪಕ್ಷ ನಾಯಕನ ಕುರಿತು ಅಭಿಪ್ರಾಯ ಸಂಗ್ರಹಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್‌ ಮಿಸ್ತ್ರಿ ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಕೆಪಿಸಿಸಿ ಹಿರಿಯ ನಾಯಕರು, ಮಾಜಿ ಸಂಸದರು, ಮಾಜಿ ಸಚಿವರು ಹಾಗೂ ಶಾಸಕರ ಅಭಿಪ್ರಾಯ ಸಂಗ್ರಹಿಸುವ ಮಿಸ್ತ್ರೀ ಅವರು ಸಲ್ಲಿಸುವ ವರದಿ ಆಧರಿಸಿ ಎಐಸಿಸಿ ವರಿಷ್ಠರು ತೀರ್ಮಾನ ಪ್ರಕಟಿಸುವ ನಿರೀಕ್ಷೆಯಿದೆ. ಈ ಮಧ್ಯೆ, ಕೇರಳದಲ್ಲಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸೂಚನೆಯಂತೆ ಎಚ್‌.ಕೆ.ಪಾಟೀಲ್‌ ದಿಲ್ಲಿಗೆ ತೆರಳಿದ್ದಾರೆ.

ಪಾಟೀಲ್‌ ಶುಕ್ರವಾರ ಅಹ್ಮದ್‌ ಪಟೇಲ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎಚ್‌.ಕೆ.ಪಾಟೀಲ್‌ ಶನಿವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.

ನಿರ್ಣಾಯಕ ಘಟ್ಟ

ಬಿಜೆಪಿ ಸರಕಾರ ಅಕಾರಕ್ಕೆ ಬಂದು 2 ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ಆಯ್ಕೆ ಸಾಧ್ಯವಾಗಿರಲಿಲ್ಲ. ಎಐಸಿಸಿ ಅಧ್ಯಕ್ಷಗಾದಿ ಗೊಂದಲ, ಆಕಾಂಕ್ಷಿಗಳ ನಡುವಿನ ಪೈಪೋಟಿ ಮತ್ತಿತರ ಕಾರಣಕ್ಕೆ ಈ ಪ್ರಕ್ರಿಯೆ ವಿಳಂಬವಾಗಿತ್ತು. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನದಲ್ಲಿಮುಂದುವರಿಕೆಗೆ ಪ್ರಯತ್ನ ನಡೆಸಿದ್ದಾರೆ.

ಬಹಳಷ್ಟು ಹಿರಿಯ ಮತ್ತು ಮೂಲ ಕಾಂಗ್ರೆಸ್‌ ನಾಯಕರು ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿತಮಗೆ ಅವಕಾಶ ಇಲ್ಲಎಂದಾದರೆ, ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಆಯ್ಕೆಯನ್ನು ಸಿದ್ದರಾಮಯ್ಯ ಬಯಸಿದ್ದಾರೆ. ಮತ್ತೊಂದೆಡೆ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ತೀವ್ರ ಪ್ರಯತ್ನ ನಡೆಸಿದ್ದು, ಕೆಲದಿನಗಳ ಹಿಂದೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂ ಅವರನ್ನು ಭೇಟಿ ಮಾಡಿದ್ದರು, ಈ ಪೈಪೋಟಿಯ ಮಧ್ಯೆ ಹಿರಿಯರಾದ ಹಾಗೂ ಮೇಲ್ಮನೆಯ ಪ್ರತಿಪಕ್ಷ ನಾಯಕರಾಗಿ ಅನುಭವ ಹೊಂದಿದ್ದ ಎಚ್‌.ಕೆ.ಪಾಟೀಲ್‌ ಅವರನ್ನು ದಿಲ್ಲಿಯ ನಾಯಕರು ಕರೆಸಿಕೊಂಡಿರುವುದು ಮಹತ್ವ ಪಡೆದುಕೊಂಡಿದೆ.

ಸಿದ್ದರಾಮಯ್ಯ ಅವರನ್ನು ಸಂಪೂರ್ಣ ಕಡೆಗಣಿಸಲು ಸಾಧ್ಯವಿಲ್ಲಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿಅವರು ಸಿಎಲ್‌ಪಿ ನಾಯಕರಾಗಿ ಮುಂದುವರಿಯುತ್ತಾರೋ ಅಥವಾ ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಿ ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡಲಾಗುತ್ತದೋ ಎಂಬುದು ಸ್ಪಷ್ಟವಿಲ್ಲ. ಪ್ರತಿಪಕ್ಷ ನಾಯಕ ಯಾರು ಎಂಬ ಪ್ರಶ್ನೆ ಮಧ್ಯೆಯೇ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷ ನಾಯಕ ಸ್ಥಾನ ಒಬ್ಬರಿಗೇ ಸಿಗಲಿದೆಯೋ ಅಥವಾ ಇಲ್ಲವೋ ಎಂಬುದೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ