ಆ್ಯಪ್ನಗರ

ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ, ಅಹ್ಮದ್ ಪಟೇಲ್ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಕೋವಿಡ್‌ ಸೋಂಕಿಗೆ ತುತ್ತಾಗಿ ನಿಧನ ಬುಧವಾರ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋ ನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

Vijaya Karnataka Web 25 Nov 2020, 9:18 am
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ನಿಧನದಿಂದಾಗಿ ಓರ್ವ ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
Vijaya Karnataka Web Ahmed Patel


ಈ ಕುರಿತಾಗಿ ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ,ಅಹ್ಮದ್ ಪಟೇಲ್ ನಿಧನದಿಂದ ಕಾಂಗ್ರೆಸ್ ಪಕ್ಷ ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ಹಿತೈಷಿಯಾಗಿದ್ದವರು.ಈ ಸಾವಿನ ದು:ಖ ಮಾತುಗಳನ್ನು ಮೀರಿದ್ದು. ಹೋಗಿಬನ್ನಿ ಪಟೇಲ್‌ಜಿ ಎಂದಿದ್ದಾರೆ.

ಕಾಂಗ್ರೆಸ್‌ ನಾಯಕ ಅಹ್ಮದ್‌ ಪಟೇಲ್‌ ನಿಧನ: ಪುತ್ರ ಫೈಜಲ್‌ ಜೊತೆ ಫೋನ್‌ ಮೂಲಕ ಮಾತನಾಡಿದ ಪ್ರಧಾನಿ ಮೋದಿ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ನನಗೆ ಆತ್ಮೀಯರಾಗಿದ್ದ ಅಹ್ಮದ್ ಪಟೇಲ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ದೀರ್ಘಕಾಲ ಸೋನಿಯಾಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಪಟೇಲ್ ಪಕ್ಷಕ್ಕೆ ಆಧಾರಸ್ಥಂಭವಾಗಿದ್ದರು. ಇವರ ಸಾವು ಪಕ್ಷಕ್ಕೆ ತುಂಬಿಬಾರದ ನಷ್ಟ.ಅವರ ಕುಟುಂಬದ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವಿಟ್ಟರ್‌ನಲ್ಲಿ ಸಂತಾಪವನ್ನು ಸೂಚಿಸಿದ್ದಾರೆ.


ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡಾ ಅಹ್ಮದ್ ಪಟೇಲ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ ಅವರು ಅಹ್ಮದ್ ಪಟೇಲ್ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದಿದ್ದಾರೆ.


ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಅಹ್ಮದ್ ಪಟೇಲ್ ಕೋವಿಡ್‌ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು.71 ವರ್ಷ ವಯಸ್ಸಿನ ಅಹ್ಮದ್‌ ಪಟೇಲ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬುಧವಾರ ಮುಂಜಾನೆ 3.30 ಸುಮಾರಿಗೆ ಸಾವನ್ನಪ್ಪಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ