ಆ್ಯಪ್ನಗರ

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಿ - ಸಿ.ಎಂ ಇಬ್ರಾಹೀಂ ಆಗ್ರಹ

ಕೊರೊನಾ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ದ್ವೇಷ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹೀಂ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 7 Apr 2020, 3:15 pm
ಬೆಂಗಳೂರು: ಕೊರೊನಾ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹೀಂ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಮಸೀದಿಗೆ ಹೋಗುವುದಿಲ್ಲ ಹಾಗೂ ಹಬ್ಬಗಳ ಆಚರಣೆ ಮನೆಯಲ್ಲಿ ಮಾಡುತ್ತೇವೆ ಎಂದು ಹೇಳಿದ್ದೇವೆ ಹೀಗಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ವಿಡಿಯೋಗಳನ್ನು ಹಾಕಿ ವೈರಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Vijaya Karnataka Web cm ibrahim


ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏನು ಕರೆ ಕೊಟ್ಟಿದ್ದಾರೆ ಅದಕ್ಕೆ ನಾವೆಲ್ಲಾ ಬೆಂಬಲ ಕೊಡಬೇಕು ಎಂದ ಅವರು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರಗಳಿಂದ ಯಾವುದೊ ಒಂದು ಜಾತಿ ಧರ್ಮದವರು ಕೊರೊನಾ ಹರಡುವ ಕೆಲಸ ಮಾಡುತ್ತಿದ್ದಾರೆ ಎಂಬ ಸಂದೇಶ ಹೋಗುತ್ತಿದೆ. ಹಳ್ಳಿಯಲ್ಲಿ ಸಮುದಾಯಗಳು ಪರಸ್ಪರ ದ್ವೇಷದಿಂದ ನೋಡುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಬ್ಲಿಘಿ ಎಫೆಕ್ಟ್‌: ಕಲಬುರಗಿಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು

ಈ ವಿಚಾರವಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಮಾಧ್ಯಮಗಳಲ್ಲಿ ಕಠಿಣ ಹೇಳಿಕೆ ನೋಡಿದ್ದಾರೆ. ಅದನ್ನು ನಾವು ಸ್ವಾಗತ ಮಾಡುತ್ತೇನೆ, ಈ ರೀತಿಯಲ್ಲಿ ಸಮುದಾಯವನ್ನು ವಿನಾಕಾರಣ ದೂರುವವರನ್ನು ಬಂಧನ ಮಾಡಿದರೆ ಸರಿ ಹೋಗುತ್ತದೆ ಎಂದರು.

ತುಮಕೂರು: ಮದುವೆ ಸಂಭ್ರಮದಿಂದ ಕೂಡಿದ್ದ ಮನೆಯಲ್ಲಿ ಸೂತಕದ ಛಾಯೆ; ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ಸಾವು

ನಮ್ಮದು ಅನ್ನ ದಾಸೋಹರ ನಾಡು, ಜನರು ಅಣ್ಣ ತಮ್ಮಂದಿರ ರೀತಿಯಲ್ಲಿ ಬದುಕುತ್ತಿದ್ದೇವೆ . ಜಗತ್ತಿನಲ್ಲಿ ಬೇರೆ ಬೇರೆ ದೇಶಗಳಲ್ಲಿ ಕೊರೊನ ಬಂದಿದೆ ಅವರು ಯಾರು ಅದಕ್ಕೆ ಜಾತಿ, ಧರ್ಮದ ಬಣ್ಣ ಬಳಿಯಲಿಲ್ಲ. ಆದರೆ ಸದ್ಯ ನಡೆಯುತ್ತಿರುವ ಬೆಳವಣಿಗೆಗಳು ನನಗೆ ತುಂಬಾ ಬೇಸರ ಹುಟ್ಟಿಸಿದೆ. ಈ ರೀತಿಯಲ್ಲಿ ಆಗಬಾರದು ಎಂದು ವಿನಂತಿಸಿಕೊಳ್ಳುತ್ತೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ