ಆ್ಯಪ್ನಗರ

ಕೆಎಸ್‌ಆರ್‌ಟಿಸಿ ನೌಕರರಿಗಿಲ್ಲ ಸಂಬಳ, ಸರ್ಕಾರದ ಆಡಳಿತ ವೈಫಲ್ಯಕ್ಕೆ ಕೈಗನ್ನಡಿ ಎಂದ ಕಾಂಗ್ರೆಸ್

ಕೋವಿಡ್‌ ನಷ್ಟದ ನೆಪದಲ್ಲಿ ಕೆಎಸ್‌ಆರ್‌ಟಿಸಿ ನೌಕರರಿಗೆ ವೇತನ ನೀಡದ ರಾಜ್ಯ ಸರ್ಕಾರದ ನಡೆಯನ್ನು ಕಾಂಗ್ರೆಸ್ ಖಂಡಿಸಿದೆ. ಸರ್ಕಾರ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಕಿಡಿಕಾರಿದೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 15 Nov 2020, 10:45 am
ಬೆಂಗಳೂರು: ಕೋವಿಡ್‌ ಕಾರಣದಿಂದಾಗಿ ಈ ಬಾರಿ ಕೆಎಸ್ಆರ್‌ಟಿಸಿ ನೌಕರರಿಗೆ ವೇತನ ನೀಡದ ರಾಜ್ಯ ಸರ್ಕಾರದ ಕ್ರಮಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಇದು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.
Vijaya Karnataka Web KSRTC


ಈ ಕುರಿತಾಗಿ ಟ್ವೀಟ್ ಮಾಡಿದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಎಸ್‌ಆರ್‌ಟಿಸಿಯ 4 ನಿಗಮಗಳ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ.

ಕಮಲದಲ್ಲಿ ವಲಸಿಗರ ಪರ್ಯಾಯ ಶಕ್ತಿ ಕೇಂದ್ರ! ಮೂಲ ಬಿಜೆಪಿಗರಿಂದ ಅಪಸ್ವರ


ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ ಎಂದು ಕಿಡಿಕಾರಿದ್ದಾರೆ. ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸದಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೂಡಲೇ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೋವಿಡ್‌ ಕಾರಣದಿಂದ ರಸ್ತೆ ಸಾರಿಗೆ ಸಂಸ್ಥೆಯ ನಿಗಮಗಳು ಸಂಕಷ್ಟದಲ್ಲಿವೆ. ಈ ಕಾರಣದಿಂದಾಗಿ ಕಳೆದ ಆರು ತಿಂಗಳಿಂದ ನೌಕರರ ವೇತನ ಪಾವತಿಗೆ ಸರ್ಕಾರದ ನೆರವನ್ನು ಪಡೆಯಲಾಗುತ್ತಿದೆ. ಆದರೆ ಈ ಬಾರಿ ಸರ್ಕಾರದಿಂದ ಕೋರಿದ ನೆರವಿಗೆ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ 15 ದಿನ ಕಳೆದರೂ 1.30 ಲಕ್ಷ ನೌಕರರಿಗೆ ಅಕ್ಟೋಬರ್‌ ತಿಂಗಳ ಸಂಬಳ ಆಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ