ಆ್ಯಪ್ನಗರ

ಆಡಳಿತ ಯಂತ್ರದ ಅರಾಜಕತೆ ಸರ್ಕಾರಿ ಅಧಿಕಾರಿಗಳಿಗೂ ಶಾಪವಾಗಿ ಪರಿಣಮಿಸಿದೆ, ಡಿಕೆ ಸುರೇಶ್

ರಾಜ್ಯದಲ್ಲಿ ಆಡಳಿತ ಯಂತ್ರದ ಅರಾಜಕತೆಯಿಂದ ಸರ್ಕಾರಿ ಅಧಿಕಾರಿಗಳಿಗೂ ಶಾಪವಾಗಿ ತಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅವರು ಟ್ವೀಟ್‌ ಮಾಡಿದ್ದು ಅವರ ವಿವರ ಹೀಗಿದೆ.

Vijaya Karnataka Web 16 Jul 2020, 4:20 pm
ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರದ ಅರಾಜಕತೆ ಸರ್ಕಾರಿ ಅಧಿಕಾರಿಗಳಿಗೂ ಶಾಪವಾಗಿ ಪರಿಣಮಿಸಿದೆ ಎಂದು ಸಂಸದ ಡಿ.ಕೆ ಸುರೇಶ್ ಕಿಡಿಕಾರಿದ್ದಾರೆ.
Vijaya Karnataka Web dk suresh


ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ಅಧಿಕಾರಿಗಳು ಕೊರೋನಾ ಪರೀಕ್ಷೆಗೆ ಒಳಪಟ್ಟರೆ, ಲ್ಯಾಬ್ ಗಳಲ್ಲಿ ಅವರ ರಿಪೋರ್ಟ್ ಗಳನ್ನೇ ನೀಡುತ್ತಿಲ್ಲ. ಇದರ ಬಗ್ಗೆ ಅಧಿಕಾರಿಗಳು ಪ್ರಶ್ನೆ ಮಾಡಿದರೆ ಮೇಲಧಿಕಾರಿಗಳಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕರುನಾಡನ್ನು ದೇವರೇ ಕಾಪಾಡಬೇಕಾ? ನಾವು ಗೆಲ್ಲಲು ನಮ್ಮಲ್ಲೇ ಶಕ್ತಿ ಇದೆ..! ಒಮ್ಮೆ ಚೆಕ್ ಮಾಡಿಕೊಳ್ಳಿ..!

ಈ ಬಗ್ಗೆ ಬಹುತೇಕ ಅಧಿಕಾರಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹೀಗೇ ಆದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಒಂದೇ ದಿನ 4 ಪೊಲೀಸರಿಗೆ ಕೊರೊನಾ; ಬಾಗಲಕೋಟೆಯ 4 ಪೊಲೀಸ್ ಠಾಣೆಗಳು ಸೀಲ್‌ಡೌನ್..!

ಕೋವಿಡ್‌ ಉಸ್ತುವಾರಿ ಸಚಿವರು ಈ ಬಗ್ಗೆ ಆಲೋಚಿಸಿ ಸಂಕಷ್ಟದ ದಿನಗಳಲ್ಲಿ ಕೊರೋನಾ ವಾರಿಯರ್ಸ್ ನಂತೆ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ನೆರವಾಗುವಂತೆ ಟ್ವೀಟ್‌ ಮೂಲಕ ಒತ್ತಾಯಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೂ ಕೊರೊನಾ ಸೋಂಕು ಪಾಸಿಟಿವ್ ಕಂಡುಬರುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ