ಆ್ಯಪ್ನಗರ

ಸೋಮವಾರದಂದು ಸಿದ್ದರಾಮಯ್ಯಗೆ ಕೋವಿಡ್‌ ತಪಾಸಣೆ, ನೆಗೆಟಿವ್‌ ಬಂದರೆ ಡಿಸ್ಚಾರ್ಜ್ ಸಾಧ್ಯತೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೋಮವಾರದಂದು ಎರಡನೇ ಸುತ್ತಿನ ಕೋವಿಡ್ ತಪಾಸಣೆ ಮಾಡಲಾಗುತ್ತದೆ. ತಪಾಸಣೆಯಲ್ಲಿ ನೆಗೆಟಿವ್ ಫಲಿತಾಂಶ ಬಂದರೆ ಶೀಘ್ರದಲ್ಲೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

Vijaya Karnataka Web 10 Aug 2020, 10:29 am
ಬೆಂಗಳೂರು: ಕೋವಿಡ್‌ ಪಾಸಿಟಿವ್‌ ಆಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೋಮವಾರದಂದು ಮತ್ತೆ ಕೋವಿಡ್‌ ತಪಾಸಣೆ ನಡೆಸಲಾಗುತ್ತದೆ.
Vijaya Karnataka Web siddaramyya


ಆಗಸ್ಟ್‌ 3 ರಂದು ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆಯ ವೇಳೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ಇದೀಗ ಆರೋಗ್ಯದಲ್ಲಿದ್ದಾರೆ.

ಕೋವಿಡ್‌ ಪಾಸಿಟಿವ್‌ ಆದರೂ ಅವರಿಗೆ ಕೊರೊನಾ ರೋಗ ಲಕ್ಷಣಗಳು ಕಂಡುಬಂದಿಲ್ಲ. ಹೀಗಿದ್ದರೂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಹಾಗೂ ವೈದ್ಯಕೀಯ ನಿಗಾದಲ್ಲಿ ಇಡಲಾಗಿದೆ. ಇದೀಗ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ, ಯಡಿಯೂರಪ್ಪಗೆ ಕೋವಿಡ್‌; ಗುಣಮುಖರಾಗಲೆಂದು ಪೂಜೆ ಸಲ್ಲಿಸಿದ ಡಿಕೆಶಿ

ಆಗಸ್ಟ್‌ 10 ರಂದು ಮತ್ತೆ ಅವರಿಗೆ ಕೋವಿಡ್‌ ತಪಾಸಣೆ ಮಾಡಲಾಗುತ್ತದೆ. ಕೋವಿಡ್‌ ತಪಾಸಣೆಯ ವೇಳೆ ಫಲಿತಾಂಶ ನೆಗೆಟಿವ್‌ ಬಂದರೆ ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಸ್ಚಾರ್ಜ್‌ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೂ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು ಅವರೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ನಡುವೆ ಸಿಎಂ ಬಿಎಸ್‌ವೈ ಕೋವಿಡ್‌ ಕಾರಣಕ್ಕಾಗಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಅವರೂ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ