ಆ್ಯಪ್ನಗರ

ಎಚ್‌ಡಿಕೆ ಬೆನ್ನಲ್ಲೇ ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ, ರೈತರಿಗೆ ನೆರವಾಗಿ ಎಂದು ಮನವಿ

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಿಎಂ ಬಿಎಸ್‌ವೈಗೆ ಪತ್ರ ಬರೆದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆಯುವ ಮೂಲಕ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ಸೂಕ್ತ ಬೆಂಬಲ ಬೆಳೆ ನೀಡುವಂತೆ ಒತ್ತಾಯಿಸಿದ್ದಾರೆ.

Vijaya Karnataka Web 30 Jan 2020, 2:58 pm
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯಿಸಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಬೆನ್ನಲ್ಲೇ ರೈತರಿಗೆ ನೆರವಾಗಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಸಿಎಂಗೆ ಪತ್ರ ಬರೆದಿದ್ದಾರೆ.
Vijaya Karnataka Web congress leader siddaramaiah letter to chief minister bs yeddyurappa
ಎಚ್‌ಡಿಕೆ ಬೆನ್ನಲ್ಲೇ ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ, ರೈತರಿಗೆ ನೆರವಾಗಿ ಎಂದು ಮನವಿ


ಕಳೆದ ಆಗಸ್ಟ್‌ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಇದರಿಂದ ನೂರಾರು ಕುಟುಂಬಗಳು ತಮ್ಮ ಬದುಕನ್ನು ಕಳೆದುಕೊಂಡಿವೆ. ರೈತರ ಮುಂಗಾರು ಬಿತ್ತನೆ ನಾಶವಾಗಿದೆ. ಅಳಿದುಳಿದ ಬೆಳೆಗೂ ಬೆಲೆ ಇಲ್ಲದಂತ್ತಾಗಿದೆ ಎಂದು ಸಿದ್ದರಾಮಯ್ಯ ಪತ್ರದ ಮೂಲಕ ಪ್ರವಾಹ ಪೀಡಿತ ಪ್ರದೇಶದ ಜನರ ಸಂಕಷ್ಟವನ್ನು ಸಿಎಂ ಬಿಎಸ್‌ವೈ ಗಮನಕ್ಕೆ ತಂದಿದ್ದಾರೆ.


ದೇಶದ ಆರ್ಥಿಕತೆ ಕುಸಿದು ಹೋಗಲು ಪ್ರಮುಖ ಕಾರಣ ಏನೆಂದರೆ ರೈತರು ಹಾಗೂ ಕೃಷಿಯನ್ನು ಕಡೆಗಣಿಸಿರುವುದು ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ರೈತರು ಬೆಳೆದ ಬೆಳೆಯ ಖರ್ಚನ್ನು ವಾಪಸ್‌ ಪಡೆದುಕೊಳ್ಳಲಾಗದ ಸ್ಥಿತಿಯಲ್ಲಿದ್ದರೆ ಆರ್ಥಿಕತೆ ಹೇಗೆ ಸುಧಾರಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಬಜೆಟ್‌ ಮುನ್ನವೇ ಸಿಎಂ ಬಿಎಸ್‌ವೈಗೆ ಪತ್ರ ಬರೆದ ಎಚ್‌ಡಿಕೆ - ಬೇಡಿಕೆ ಹೀಗಿದೆ

ಭತ್ತ, ಜೋಳ, ರಾಗಿಗೆ ಬೆಂಬಲ ಬೆಲೆ ನೀಡಿ ಸರಕಾರ ಖರೀದಿಸಲು ಹೊರಟಿರುವುದು ಸರಿಯಾಗಿದೆ. ಆದರೆ ಸರ್ಕಾರ ನಿಗದಿ ಪಡಿಸಿದರು ಬೆಂಬಲ ಬೆಲೆಯು ರೈತ ಮಾಡಿದ ಖರ್ಚಿಗೆ ಹೋಲಿಸಿ ನೋಡಿದರೆ ಲಾಭದ ಮಾತೇ ಇಲ್ಲ ಎಂದಿದ್ದಾರೆ.

ಈ ನಿಟ್ಟಿನಲ್ಲಿ ರೈತರ ಪರವಾಗಿರುವ ಡಾ. ಸ್ವಾಮಿನಾಥನ್ ವರದಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರೈತರ ಬೆಲೆಗಳಿಗೆ ಸೂಕ್ತ ಬೆಂಬಲ ಬೆಲೆಯನ್ನು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ