ಆ್ಯಪ್ನಗರ

ಕೋವಿಡ್‌ ಭ್ರಷ್ಟಾಚಾರ: ಬಿಜೆಪಿಗೆ ತಿರುಗುಬಾಣವಾಗುತ್ತಾ ಲೀಗಲ್‌ ನೋಟಿಸ್‌!

ಕೋವಿಡ್‌ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿ ಜಾರಿಗೊಳಿಸಿದ್ದ ಲೀಗಲ್‌ ನೋಟಿಸ್‌ ಇದೀಗ ಬಿಜೆಪಿಗೆ ಮುಳುವಾಗಿ ಪರಿಣಮಿಸುವ ಸಾಧ್ಯತೆ ಇದೆ. ಈ ಕುರಿತಾಗಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ.

Vijaya Karnataka Web 2 Aug 2020, 4:22 pm
ಬೆಂಗಳೂರು: ಕೋವಿಡ್‌ ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ನೋಟಿಸ್‌ ಜಾರಿಗೊಳಿಸಿದೆ. ಆದರೆ ಬಿಜೆಪಿ ನೀಡಿದ ಲೀಗಲ್‌ ನೋಟಿಸ್‌ ಇದೀಗ ಬಿಜೆಪಿಗೆ ತಿರುಗುಬಾಣವಾಗಿ ಪರಿಣಮಿಸಿದೆ.
Vijaya Karnataka Web bs yeddyurappa press meet


ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಅವರ ಸೂಚನೆಯಂತೆ ವಕೀಲರ ಮೂಲಕ ಲೀಗಲ್‌ ನೋಟಿಸ್‌ ಜಾರಿಗೊಳಿಸಲಾಗಿತ್ತು. ಕೋವಿಡ್‌ ಭ್ರಷ್ಟಾಚಾರದ ಕುರಿತಾಗಿ ಸುಳ್ಳು ಆರೋಪ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಕೊರೊನಾ ಸಾವು-ನೋವುಗಳಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ! ಸಿದ್ದರಾಮಯ್ಯ ಕಿಡಿ


ಈ ವಿಚಾರವಾಗಿ ಇದೀಗ ಟ್ವೀಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ “ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿ ಪಕ್ಷ ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ ಎಂದಿದ್ದಾರೆ.

ಬಿಜೆಪಿ ಮುಖಂಡರನ್ನೇ ಕೆರಳಿಸಿದ ಸಿಪಿ ಯೋಗೇಶ್ವರ್ ಹೇಳಿಕೆ ಅವರಿಗೇ ತಿರುಗುಬಾಣ ಆಗುತ್ತಾ?

ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ? ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಲೀಗಲ್‌ ನೋಟಿಸ್‌ ಜಾರಿಗೊಳಿಸಿದ್ದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ