ಆ್ಯಪ್ನಗರ

ಶಿವಮೊಗ್ಗ ಡೈನಾಮೈಟ್ ಸ್ಫೋಟ: ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಶಿವಮೊಗ್ಗದಲ್ಲಿ ನಡೆದ ಡೈನಾಮೈಟ್ ಸ್ಫೋಟ ಪ್ರಕರಣದ ಕುರಿತಾಗಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 23 Jan 2021, 3:33 pm
ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಡೈನಾಮೈಟ್ ಸ್ಫೋಟ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಾಗಿ ಸುದ್ದಿಗೋಷ್ಠಿ ನಡೆಸಿದ ಅವರು ಹಾಲಿ ಹೈಕೋರ್ಟ್‌ ನ್ಯಾಯಾಧೀಶರ ನಿಗಾದಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
Vijaya Karnataka Web Siddaramaiah


ಶಿವಮೊಗ್ಗದಲ್ಲಿ ನಡೆದದ್ದು ದೊಡ್ಡ ದುರಂತ. ಐದು ಮಂದಿ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಜೊತೆಗೆ ಮಾತನಾಡಿದ್ದೇನೆ. ಆಂಧ್ರ ಪ್ರದೇಶದಿಂದ ಆರೋಪಿಗಳು ಡೈನಾಮೈಟ್ ತಂದಿದ್ದಾರೆ. ಆದರೆ ಇದಕ್ಕೆ ಪರವಾನಗಿ ಪಡೆದಿಲ್ಲ ಹಾಗೂ ಸ್ಫೋಟಕವನ್ನು ತಂದು ಸುರಕ್ಷಿತ ಜಾಗದಲ್ಲಿ ಇಟ್ಟಿರಲಿಲ್ಲ ಎಂದು ಆರೋಪಿಸಿದರು.

ಡೈನಾಮೈಟ್‌ ಸ್ಫೋಟಕ್ಕೆ ಮನೆ ಜಖಂ..! ಹಾಸಿಗೆ ಹಿಡಿದ ಮಕ್ಕಳು, ವೃದ್ಧರು..! ರಾತ್ರಿಯಿಡೀ ನಿದ್ದೆಗೆಟ್ಟ ಗ್ರಾಮಸ್ಥರು..!

ಅಧಿಕಾರಗಳ ಬೇಜಾವಾಬ್ದಾರಿತ ನಿರ್ಲಕ್ಷ್ಯತನ ಇದಕ್ಕೆ ಕಾರಣ ಎಂದು ಆರೋಪಿಸಿದರ ಅವರು, ಬಿಜೆಪಿ ಮುಖಂಡ ಅಯನೂರು ಮಂಜುನಾಥ್ ಪ್ರಕಾರ ಬಹಳಷ್ಟು ಅಕ್ರಮ ಗಣಿಗಾರಿಕೆ ಶಿವಮೊಗ್ಗದಲ್ಲಿ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ ಎಂದರು.

ಸಿಎಂ ಅವರ ಜಿಲ್ಲೆಯಲ್ಲಿ 100 ಕ್ಕೂ ಅಧಿಕ ಅಕ್ರಮ ಗಣಿಗಾರಿಕೆ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಇದು ಜಿಲ್ಲಾಡಳಿತದ ಸಂಪೂರ್ಣ ವೈಫಲ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ
ಸಿಎಂ ಬಿಎಸ್‌ ಯಡಿಯೂರಪ್ಪ ಇದಕ್ಕೆ ಜವಾಬ್ದಾರಿ ಎಂದು ಆರೋಪಿಸಿದರು.

ನನ್ನ ಪ್ರಕಾರ ಇದು ಗಂಭೀರವಾದ ವಿಚಾರ. ಘಟನೆಯ ಕುರಿತಾಗಿ ನ್ಯಾಯಾಂಗ ತನಿಖೆ ನಡೆಯಬೇಕು ಹಾಗೂ ಅವರ ಕುಟುಂಬದವರಿಗೆ ಉದ್ಯೋಗ ಹಾಗೂ ನ್ಯಾಯಯುತ ಪರಿಹಾರ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಅಕ್ರಮ ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು ಅದು ಯಾವ ಪಕ್ಷದವರದ್ದೇ ಆಗಿರಲಿ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ