ಆ್ಯಪ್ನಗರ

‘ಸೋಮಶೇಖರ್‌ ರೆಡ್ಡಿಗೆ ಮಾನ ಮರ್ಯಾದೆ ಇದೆಯಾ ’ - ಗರಂ ಆದ್ರು ಜಮೀರ್

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ನಡೆದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಶಾಸಕರಾದ ಸೋಮಶೇಖರ್ ರೆಡ್ಡಿ ವಿರುದ್ಧ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಕಿಡಿಕಾರಿದ್ದಾರೆ.

Vijaya Karnataka Web 6 Jan 2020, 5:59 pm
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಕಿಡಿಕಾರಿದ್ದಾರೆ.
Vijaya Karnataka Web congress leader zameer ahmed khan slams at bjp mla somashekar reddy
‘ಸೋಮಶೇಖರ್‌ ರೆಡ್ಡಿಗೆ ಮಾನ ಮರ್ಯಾದೆ ಇದೆಯಾ ’ - ಗರಂ ಆದ್ರು ಜಮೀರ್


ಬಳ್ಳಾರಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸೋಮಶೆಖರ್ ರೆಡ್ಡಿ “ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಬಂದೂಕಿನಿಂದ ಶೂಟ್ ಮಾಡಿದರೆ ಜನಸಂಖ್ಯೆಯಾದರೂ ಕಡಿಮೆಯಾಗುತಿತ್ತು” ಎಂಬ ಹೇಳಿಕೆ ಕೊಟ್ಟಿದ್ದರು. ಇದಕ್ಕೆ ಸೋಮವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಜಮೀರ್ ಅಹಮ್ಮದ್ ಖಾನ್, ಸೋಮಶೇಖರ್‌ ರೆಡ್ಡಿ ವಿರುದ್ಧ ತೀವೃ ವಾಗ್ದಾಳಿ ನಡೆಸಿದ್ದಾರೆ.


ಸೋಮಶೇಖರ್ ರೆಡ್ಡಿಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದ ಜಮೀರ್, ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಸೋಮಶೇಖರ್ ರೆಡ್ಡಿ ಮುಸ್ಲಿಂ ಸಮುದಾಯ ಮುಖಂಡರ ಕೈಕಾಲು ಹಿಡಿದಿದ್ದಾರೆ ಎನ್ನಲಾಗಿರುವ ವಿಡಿಯೋವನ್ನು ಪ್ರದರ್ಶಿಸಿದರು.

‘ಸಿಎಎ ವಿರುದ್ಧ ಪ್ರತಿಭಟಿಸುವವರನ್ನು ಶೂಟ್ ಮಾಡಿದ್ರೆ ಜನಸಂಖ್ಯೆ ಕಡಿಮೆಯಾಗ್ತಿತ್ತು’! ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಈಗಾಗಲೇ ಸೋಮಶೇಖರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದೇವೆ. ಆದರೆ ಇದುವರೆಗೂ ಯಾವುದೇ ಕ್ರಮ ಜರಗಿಲ್ಲ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸಬೇಕು ಎಂಬುವುದು ನಮ್ಮ ಬೇಡಿಕೆ ಎಂದ್ರು ಜಮೀರ್.

'ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ರಾಜಕೀಯ ಪ್ರೇರಿತ': ಯಾರಿಗೂ ತೊಂದರೆಯಿಲ್ಲ ಎಂದ ಕಾಂಗ್ರೆಸ್‌ ನಾಯಕ

ಸೋಮಶೇಖರ್ ರೆಡ್ಡಿ ಶಾಸಕರಾಗಿ ಇಂತಹ ಹೇಳಿಕೆ ನೀಡಬಾರದು. ಈ ಕಾರಣಕ್ಕಾಗಿ ಇವರನ್ನು ಬಿಜೆಪಿ ಸದಸ್ಯತ್ವದಿಂದ ವಜಾಗೊಳಿಸಬೇಕು. ಒಂದು ವೇಳೆ ಕ್ರಮ ಜರಗಿಸದೇ ಇದ್ದರೆ ಮುಂದಿನ ಸೋಮವಾರದಿಂದ ಸೋಮಶೇಖರ್ ರೆಡ್ಡಿ ಮನೆಯ ಮುಂದೆ ಧರಣಿ ಕೂರುತ್ತೇನೆ ಎಂದು ಎಚ್ಚರಿಸಿದರು.

ಬೇರೆ ಬೇರೆ ಧರ್ಮದವರಾದರೂ ನಾವೆಲ್ಲಾ ಪ್ರೀತಿಯಿಂದ ಇದ್ದೇವೆ. ಧರ್ಮದ ಆಧಾರದಲ್ಲಿ ನಾನು ಯಾರನ್ನು ನೋಡುವುದಿಲ್ಲ. ಸೋಮಶೇಖರ್ ರೆಡ್ಡಿ ಕರ್ನಾಟದರಲ್ಲ. ಖಡ್ಗವನ್ನು ತೆಗೆದುಕೊಂಡು ಬಂದರೆ ನನ್ನ ಬಳಿ ಮೊದಲು ಬರಲಿ ಹಾಗೆ ಬಂದರೆ ನಾವೇನು ಬಳೆ ತೊಟ್ಟು ಕುಳಿತುಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ