ಆ್ಯಪ್ನಗರ

ಮೈತ್ರಿ ಸರಕಾರಕ್ಕೆ ಸಂಕಷ್ಟ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಆನಂದ್ ಸಿಂಗ್

ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಇಂದು (ಸೋಮವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Vijaya Karnataka Web 1 Jul 2019, 10:33 am
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಇಂದು ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Vijaya Karnataka Web anand sing


ಈ ಸಂದರ್ಭದಲ್ಲಿ ಸ್ಪೀಕರ್ ಮನೆಯಲ್ಲಿ ಇಲ್ಲದ ಕಾರಣ ರಾಜೀನಾಮೆ ಬಗ್ಗೆ ಅವರು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಎಲ್ಲ ಬೆಳವಣಿಗೆಯ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಇಂದು (ಸೋಮವಾರ) ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.

ಬಂಡಾಯ ಶಾಸಕರಾದ ನಾಗೇಂದ್ರ, ಗಣೇಶ್ ಹಾಗೂ ಬಿ.ಸಿ ಪಾಟೀಲ್ ಮೊಬೈಲ್ ಸ್ವಿಚ್ ಆಫ್ ಆಗಿರುವ ಕಾರಣ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರಕ್ಕೆ ಸಂಕಷ್ಟ ಎದುರಾಗಿದೆ.

ಆನಂದ್ ಸಿಂಗ್ ರಾಜೀನಾಮೆ ಖಚಿತಪಡಿಸದ ಸ್ಪೀಕರ್

ಈ ಕುರಿತು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, 'ಆನಂದ್ ಸಿಂಗ್ ನನಗೆ ರಾಜೀನಾಮೆ ಕೊಟ್ಟಿಲ್ಲ. ಸ್ವೀಕರ್ ಕಚೇರಿಗೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಇನ್ನಷ್ಟು ಶಾಸಕರು ರಾಜೀನಾಮೆ ನೀಡುವ ಬಗ್ಗೆಯೂ ಮಾಹಿತಿ ಇಲ್ಲ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ