ಆ್ಯಪ್ನಗರ

ಕೇಂದ್ರ ಪರಿಹಾರ ಕೊಡದಿದ್ದರೆ ಹೋರಾಟ: ಉಗ್ರಪ್ಪ

ರಾಜ್ಯದಲ್ಲಾದ ಪ್ರವಾಹದಿಂದ ಅಂದಾಜು 1 ಲಕ್ಷ ಕೋಟಿ ರೂ. ನಷ್ಟವುಂಟಾಗಿದ್ದು, ಕೇಂದ್ರ ಸರಕಾರ ಈ ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಿ, 5 ಸಾವಿರ ಕೋಟಿ ರೂ. ಪರಿಹಾರ ನೀಡಬೇಕೆಂದು ಉಗ್ರಪ್ಪ ಆಗ್ರಹಿಸಿದ್ದಾರೆ.

Vijaya Karnataka Web 16 Aug 2019, 5:57 pm
ಬೆಂಗಳೂರು: ರಾಜ್ಯದಲ್ಲಾದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೇಂದ್ರ ಸರಕಾರ 5 ಸಾವಿರ ಕೋಟಿ ರೂ. ಪರಿಹಾರ ನೀಡಬೇಕು. ಇಲ್ಲದೇ ಹೋದಲ್ಲಿ ಕಾಂಗ್ರೆಸ್‌ ಹೋರಾಟಕ್ಕಿಳಿಯಲಿದೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web ugrapp


ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಿಂದ ಸಾಕಷ್ಟು೧ ಲಕ್ಷ ಕೋಟಿ ಹಾನಿಯಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಭೇಟಿಯೇ ನೀಡಿಲ್ಲ. ಬದಲಾಗಿ ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದ್ದಾರೆ. ಆದರೆ ಇಲ್ಲಿನ ಪರಿಸ್ಥಿತಿ ಬಗ್ಗೆ ಅವರು ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಬೇಕಿತ್ತು. ಈ ಅತೀವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೇಂದ್ರ ಸರಕಾರ ಐದು ಸಾವಿರ ಕೋಟಿ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಬಿಎಸ್‌ವೈ-ಮೋದಿ ಭೇಟಿ : ಪರಿಹಾರ ಘೋಷಣೆ ಎಂದು?

ಸಿಎಂ ಯಡಿಯೂರಪ್ಪ ಬೆಂಗಳೂರು ಟು ದೆಹಲಿ, ದೆಹಲಿ ಟು ಬೆಂಗಳೂರು ದಂಡಯಾತ್ರೆ ಮಾಡುತ್ತಿದ್ದಾರೆ. ಅವರ ಸ್ಥಿತಿ ನೋಡಿದರೆ ಗಾಬರಿಯಾಗುತ್ತಿದೆ ಎಂದು ವ್ಯಂಗ್ಯವಾಡಿದ ಅವರು, ಅವರ ಸ್ವಾಭಿಮಾನ ಶೂನ್ಯವಾಗಿದೆ. ಏನಾದ್ರೂ ಪರವಾಗಿಲ್ಲ ಅಧಿಕಾರ ಸಾಕು ಎಂಬಂತಿದ್ದಾರೆ. ಪ್ರವಾಹದಿಂದ ಸಾಕಷ್ಟು1 ಲಕ್ಷ ಕೋಟಿ ರೂ. ಹಾನಿಯಾಗಿದೆ. ರಾಜ್ಯಕ್ಕೆ ಭೇಟಿ ನೀಡಿದ ರಾಷ್ಟ್ರದ ನಾಯಕರು, ನಷ್ಟವನ್ನು ಅಂದಾಜಿಸಿಲ್ಲ ಎಂದು ದೂರಿದರು.

ಕೇಂದ್ರದಿಂದ ಸದ್ಯ ಸಿಕ್ಕಿಲ್ಲ ನೆರೆ ಪರಿಹಾರ; 10 ಸಾವಿರ ಕೋಟಿ ರೂ. ಬಿಡುಗಡೆಗೆ ಬಿಎಸ್‌ವೈ ಮನವಿ

ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ವೇಳೆ ರಾಯಚೂರಿನಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಸ್ಥಳದಲ್ಲೇ 1600 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು. ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಲೇ ಇಲ್ಲ. ಪರಿಹಾರ ಕೇಳಿದರೆ ನೋಟ್ ಫ್ರಿಂಟ್ ಮಿಷಿನ್ ಇಲ್ಲ ಎಂದಿದ್ದಾರೆ. ಗುಜರಾತ್‌ಗೆ ಐದು ಸಾವಿರ ಕೋಟಿ ರೂ, ಮಹಾರಾಷ್ಟ್ರಕ್ಕೆ ನಾಲ್ಕು ಸಾವಿರ ಕೋಟಿ ರೂ. ನೆರೆ ಪರಿಹಾರ ಸಿಕ್ಕಿದೆ. 25 ಮಂದಿ ಸಂಸದರನ್ನು ಹೊಂದಿರುವ ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ಪರಿಹಾರ ಸಿಕ್ಕಲ್ಲ. ಅಮಿತ್‌ ಶಾ, ಮೋದಿ ಹಾಗೂ ಯಡಿಯೂರಪ್ಪ ಜನರ ಬದುಕಿನಲ್ಲಿ ಆಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರುಣಾರ್ಭಟಕ್ಕೆ ರಾಜ್ಯದಲ್ಲಾದ ಹಾನಿ ಎಷ್ಟು?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ