ಆ್ಯಪ್ನಗರ

ಬೀದರ್ ಶಾಹೀನ್ ವಿದ್ಯಾಸಂಸ್ಥೆಯ ಮೇಲೆ ದೇಶದ್ರೋಹದ ಕೇಸ್, ಫೆ. 14 ರಂದು ಕಾಂಗ್ರೆಸ್ ಪ್ರತಿಭಟನೆ

ಸಿಎಎ ವಿರೋಧಿ ನಾಟಕ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಲಾಗಿದೆ ಎಂಬ ಆರೋಪದಡಿಯಲ್ಲಿ ಬೀದರ್‌ನ ಶಾಹೀನ್ ವಿದ್ಯಾಸಂಸ್ಥೆಯ ಮೇಲೆ ದೇಶದ್ರೋಹಿ ಪ್ರಕರಣವನ್ನು ದಾಖಲು ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.

Vijaya Karnataka Web 12 Feb 2020, 11:59 am
ಬೆಂಗಳೂರು: ಶಾಲಾ ವಾರ್ಷಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಟಕ ಪ್ರದರ್ಶನ ನೀಡಿದ ಕಾರಣಕ್ಕಾಗಿ ಬೀದರ್‌ನ ಶಾಹೀನ್‌ ವಿದ್ಯಾಸಂಸ್ಥೆಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಫೆ. 14 ರಂದು ಪ್ರತಿಭಟನೆಗೆ ಮುಂದಾಗಿದೆ.
Vijaya Karnataka Web congress party will stage a protest at the gandhi statue at maurya circle on february 15
ಬೀದರ್ ಶಾಹೀನ್ ವಿದ್ಯಾಸಂಸ್ಥೆಯ ಮೇಲೆ ದೇಶದ್ರೋಹದ ಕೇಸ್, ಫೆ. 14 ರಂದು ಕಾಂಗ್ರೆಸ್ ಪ್ರತಿಭಟನೆ


ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದ್ದು ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರುಗಳು ಭಾಗಿಯಾಗಲಿದ್ದಾರೆ.

ಜನವರಿ 21 ರಂದು ಬೀದರ್‌ನ ಶಾಹಿನ್ ವಿದ್ಯಾಸಂಸ್ಥೆಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶನವನ್ನು ವಿದ್ಯಾರ್ಥಿಗಳು ನಡೆಸಿದ್ದರು. ನಾಟಕ ಪ್ರದರ್ಶನ ವೇಳೆ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ಕುರಿತಾಗಿ ಎಬಿವಿಪಿ ಮುಖಂಡರೊಬ್ಬರು ದೂರು ನೀಡಿದ್ದರು.

ಬೀದರ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ನಾಲ್ಕನೇ ಬಾರಿ ಪೊಲೀಸ್ ವಿಚಾರಣೆಗೊಳಗಾದ ವಿದ್ಯಾರ್ಥಿಗಳು

ದೂರಿನ ಆಧಾರದಲ್ಲಿ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥ ಹಾಗೂ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಜೊತೆಗೆ ವಿದ್ಯಾರ್ಥಿಯೊಬ್ಬರ ಪಾಲಕರಾದ ಅನುಜಾ ಮಿನ್ಸಾ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಬೀದರ್ ಪೊಲೀಸರ ಈ ಕ್ರಮಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪೊಲೀಸರು ಹಾಗೂ ರಾಜ್ಯ ಸರಕಾರದ ನಡೆಯನ್ನು ಖಂಡಿಸಿದ್ದರು.

ಇದರ ಬೆನ್ನಲ್ಲೇ ಕಾಂಗ್ರೆಸ್ ಫೆಬ್ರವರಿ 14 ರಂದು ಬೆಂಗಳೂರಿನ ಮೌರ್ಯ ಸರ್ಕಲ್‌ ಮುಂಭಾಗದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಿದೆ. ಫೆಬ್ರವರಿ 17 ರಂದು ಎಸ್‌ಸಿ-ಎಸ್‌ಟಿ ಮೀಸಲಾತಿ ತಡೆ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಟೌನ್‌ ಹಾಲ್‌ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ