ಆ್ಯಪ್ನಗರ

ದೊರೆಸ್ವಾಮಿ ವಿರುದ್ಧ ಯತ್ನಾಳ್ ಹೇಳಿಕೆ, ಸದನದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಪ್ಲಾನ್

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ.

Vijaya Karnataka Web 28 Feb 2020, 7:02 pm
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಸದನದಲ್ಲೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.
Vijaya Karnataka Web congress planning to protest against basanagouda patil yatnal in session
ದೊರೆಸ್ವಾಮಿ ವಿರುದ್ಧ ಯತ್ನಾಳ್ ಹೇಳಿಕೆ, ಸದನದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಪ್ಲಾನ್


ಮಾರ್ಚ್‌ 3 ರಂದು ಬಜೆಟ್ ಅಧಿವೇಶನ ನಡೆಯಲಿದ್ದು ಮೊದಲ ದಿನದ ಅಧಿವೇಶನಲ್ಲೇ ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲು ತಯಾರಿ ನಡೆಸುತ್ತಿದೆ.

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌ ಹಾಗೂ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಯತ್ನಾಳ್ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಶಾಂತಿ ಕದಡಲು ಯತ್ನಿಸುವವರ ಜೊತೆ ದೊರೆಸ್ವಾಮಿ ಸಂಪರ್ಕ - ಈಶ್ವರಪ್ಪ ಆರೋಪ

ಹೇಳಿಕೆಯನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಕಾಂಗ್ರೆಸ್ ಪ್ರತಿಭಟನೆಯನ್ನು ನಡೆಸಿದೆ. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಮುಂದಾಗಿದೆ.

ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌! ಯತ್ನಾಳ್ ವಿವಾದಾತ್ಮಕ ಹೇಳಿಕೆ

ಈ ವಿಚಾರವಾಗಿ ಶುಕ್ರವಾರ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ದೊರೆಸ್ವಾಮಿಗೆ ಪಾಕ್ ಏಜೆಂಟ್ ಎಂದು ಕರೆದಿರುವುದು ಆಘಾತಕಾರಿಯಾಗಿದ್ದು, ಶಾಸಕ ಯತ್ನಾಳ್ ಕ್ಷಮೆಯಾಚನೆ ಕೇಳದೆ ಇದ್ದರೆ ವಿಧಾನಸಭೆಯಲ್ಲಿ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ದೊರೆಸ್ವಾಮಿಯವರು ಸೇರಿ ಎಲ್ಲಾ ಸ್ವಾತಂತ್ರ್ಯ ಸೇನಾನಿಗಳು ಬ್ರಿಟಿಷರ ಲಾಠಿ ಏಟು ತಿಂದಿದ್ದಾರೆ, ಜೈಲಿಗೆ ಹೋಗಿ ಬಂದಿದ್ದಾರೆ. ಅವರ ಪರಿಶ್ರಮದಿಂದಾಗಿ ನಾವು ಸ್ವತಂತ್ರರಾಗಿದ್ದೇವೆ ಎಂದ ಅವರು ಯತ್ನಾಳ್‌ ಹೇಳಿಕೆಗೆ ಕ್ಷಮೆಯಾಚನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ