ಆ್ಯಪ್ನಗರ

ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ವಾರಾಣಸಿಯಲ್ಲಿ ಬನಾರಸ್‌ ಹಿಂದೂ ವಿವಿಯ ಟ್ರೂಮಾ ಸೆಂಟರ್‌ನಲ್ಲಿ ಗಾಯಾಳುಗಳನ್ನು ಶುಕ್ರವರ ಭೇಟಿಯಾದ ಪ್ರಿಯಾಂಕಾ ಅಲ್ಲಿಂದ, ಮೃತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಸೋನಭದ್ರಾಗೆ ಆಗಮಿಸುತ್ತಿದ್ದರು. ಆದರೆ ನಗರದಲ್ಲಿ ಗೋರ್ವಾಲ್‌ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಇರುವ ಹಿನ್ನೆಲೆಯಲ್ಲಿ ಪೊಲೀಸರು ಮಾರ್ಗ ಮಧ್ಯದ ನಾರಾಯಣಪುರದಲ್ಲಿ ತಡೆಯೊಡ್ಡಿದರು.

Vijaya Karnataka Web 20 Jul 2019, 1:05 pm
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
Vijaya Karnataka Web congress


ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಬಂಧಿನ ಖಂಡಿಸಿ ಬಳ್ಳಾರಿಯಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಅನಿಲ್ ಲಾಡ್, ಜಿಲ್ಲಾಧ್ಯಕ್ಷ ಮಹ್ಮದ್ ರಫಿಕ್ ಸೇರಿದಂತೆ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

ಕೆಲ ದಿನಗಳ ಹಿಂದೆ ಭೂ ಕಲಹಕ್ಕೆ ಒಂದೇ ಕುಟುಂಬದ ಹತ್ತು ಮಂದಿಯ ಹತ್ಯೆಗಾಗಿ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಸೋನಭದ್ರಾ, ಶುಕ್ರವಾರ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಪೊಲೀಸರ ನಡುವೆ ಸಂಘರ್ಷಕ್ಕೆ ಸಾಕ್ಷಿಯಾಯಿತು.

ಮೃತಪಟ್ಟ 10 ಮಂದಿಯ ಕುಟುಂಬ ಸದಸ್ಯರನ್ನು ಭೇಟಿಯಾಗಲು ಉತ್ತರ ಪ್ರದೇಶದ ತೆರಳುತ್ತಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮಾರ್ಗಮಧ್ಯೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಕೆಲಕಾಲ ಘರ್ಷಣೆಯ ವಾತಾವರಣ ಸೃಷ್ಟಿಯಾಗಿತ್ತು.

ಪ್ರಿಯಾಂಕಾ ಅವರ ವಿರುದ್ಧ ಪೊಲೀಸರ ನಡೆಯನ್ನು ಖಂಡಿಸಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ಕಾರ್ಯಕರ್ತರು ರಸ್ತೆಯಲ್ಲೇ ಧರಣಿ ಕುಳಿತರು. ಇದರೊಂದಿಗೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ಹಲವು ಬಾರಿ ಮನವಿಗೂ ಪ್ರತಿಭಟನಾಕಾರರು ಸ್ಪಂದಿಸದಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಇದಾದ ಬಳಿಕ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ಕಾಂಗ್ರೆಸ್‌ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು. ಪ್ರಿಯಾಂಕಾ ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದು ಸಮೀಪದ ಚುನಾರ್‌ ವಿಶ್ರಾಂತಿ ಗೃಹಕ್ಕೆ ಕರೆದೊಯ್ದು ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ