ಆ್ಯಪ್ನಗರ

ಕೊರೊನಾ ಎಫೆಕ್ಟ್‌: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ

ಕೊರೊನಾ ಸಂಕಷ್ಟದ ಅವಧಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಆಶಾ ಕಾರ್ಯಕರ್ತರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿದೆ. ಈ ಕುರಿತಾದ ವರದಿ ಇಲ್ಲಿದೆ.

Vijaya Karnataka Web 8 Jul 2020, 2:18 pm
ಬೆಂಗಳೂರು: ವೇತನ ಹೆಚ್ಚಳ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ ಸೂಚಿಸಿದೆ.
Vijaya Karnataka Web asha protest


ತಮ್ಮ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಹೋರಾಟದ ಹಾದಿ ತುಳಿದಿರುವ ಆಶಾ ಕಾರ್ಯಕರ್ತೆಯ ನಿಯೋಗ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಸಂಕಷ್ಟ ನಿವೇದಿಸಿಕೊಂಡರು.

ಕೊರೊನಾ ಸಂಕಷ್ಟದ ನಡುವೆ ಸರ್ಕಾರಕ್ಕೆ ತಟ್ಟಲಿದೆ ಆಶಾ ಕಾರ್ಯಕರ್ತೆಯರ ಮುಷ್ಕರದ ಬಿಸಿ!

ಜತೆಗೆ ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಕೋರಿದರು. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿ.ಕೆ ಶಿವಕುಮಾರ್ ಬೇಕಾದ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ವೇತನ ಈಡೇರಿಕೆ ಕುರಿತಾಗಿ ಸರ್ಕಾರ ನೀಡಿದ ಭರವಸೆ ಈಡೇರಿಲ್ಲ ಎಂದು ಆರೋಪಿಸಿ ಆಶಾ ಕಾರ್ಯಕರ್ತೆಯರು ಹೋರಾಟದ ಹಾದಿ ತುಳಿಯಲು ಮುಂದಾಗಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತಿದ್ದಾರೆ.

ಹೀಗಿದ್ದರೂ ಅವರಿಗೆ ಸಿಗಬೇಕಾಗಿರುವ ಗೌರವ ಧನ ಹೆಚ್ಚಳ ಹಾಗೂ ಇನ್ನಿತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಜುಲೈ 10 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ